Mysore
33
overcast clouds

Social Media

ಭಾನುವಾರ, 05 ಏಪ್ರಿಲ 2026
Light
Dark

ಶಾಂತಿಯ ತೋಟದಲ್ಲಿ ವಿಷ ಬೀಜ ಬಿತ್ತುವ ಕೆಲಸ: ಬಿವೈವಿ ಆರೋಪ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕಾಂಗ್ರೆಸ್‌ನವರೇ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಡಿಸಿಎಂ ಡಿಕೆ ಶಿವಕುಮಾರ್‌ ಅವರು ನಾಡಗೀತೆ ಓದಲಿ, ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದ ಶಾಂತಿ ತೋಟದಲ್ಲಿ ಆಶಾಂತಿ ಮೂಡಿಸುತ್ತಿದ್ದಾರೆ. ಡಿಕೆ ಶಿವಕುಮಾರ್‌, ಸಿದ್ದರಾಮಯ್ಯ ಅವರ ಈ ಕೆಲಸದ ವಿರುದ್ಧ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ಹೇಳಿದರು.

ಮುಸ್ಲಿಂರನ್ನು ಎಂಎಲ್‌ಸಿ. ಎಂಪಿ ಮಾಡಿ ಎಂಬ ಡಿಕೆ ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಎಪಿಜೆ ಅಬ್ದುಲ್‌ ಕಲಾಂ ಅವರನ್ನು ರಾಷ್ಟ್ರಪತಿಯಾಗಿ, ಅಬ್ದುಲ್‌ ನಜೀರ್‌ರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದೇವೆ. ಉಸ್ತಾದ್‌ ಬಿಸ್ಮಿಲ್ಲಾ ಖಾನ್‌ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿದವರು ಯಾರು ಎಂದು ಪ್ರಶ್ನಿಸಿದರು.

 

Tags:
error: Content is protected !!