ರಾಜ್ಯ

2028ರ ಹೊತ್ತಿಗೆ ದೇಶ ಹಾಗೂ ರಾಜ್ಯ ಏಡ್ಸ್‌ ಮುಕ್ತವಾಗಲಿ:ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2028ರ ಹೊತ್ತಿಗೆ ಭಾರತದ ದೇಶ, ಕರ್ನಾಟಕ ರಾಜ್ಯ ಏಡ್ಸ್ ಮುಕ್ತವಾಗಲಿ. ಈ ದಿಕ್ಕಿನಲ್ಲಿ ಎಲ್ಲರೂ ಒಟ್ಟಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲಾಇದ್ದ ವಿಶ್ವ ಏಡ್ಸ್ ದಿನ 2023 ಮತ್ತು 25 ನೇ ರಜತ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ವಿಶ್ವ ಏಡ್ಸ್ ದಿನ, ಈ ಸಾಂಕ್ರಾಮಿಕ ರೋಗವನ್ನು ತಡೆಯುವ ಜವಾಬ್ದಾರಿ ಎಲ್ಲರ ಮೇಲಿದೆ. ಹೆಚ್ ಐ ವಿ ಮುಕ್ತ ಸಮಾಜವಾಗಿಸುವುದು ಎಲ್ಲರ ಜವಾಬ್ದಾರಿ ಎಂದರು.

ಇತ್ತಿಚಿನ ದಿನಗಳಲ್ಲಿ ಹೆಚ್ ಐವಿ ಪೀಡಿತರ ಹಾಗೂ ಅದರ ಹರಡುವಿಕೆಯೂ ಕಡಿಮೆಯಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ. ಈ ರೋಗ 1986 ರಲ್ಲಿ ಭಾರತದಲ್ಲಿ ಹಾಗೂ 1987 ರಲ್ಲಿ ಕರ್ನಾಟಕದಲ್ಲಿ ಪತ್ತೆಯಾಯಿತು. ನಮ್ಮ ಸಮಾಜವನ್ನು ಹೆಚ್ ಐ ವಿ ಮುಕ್ತ ಸಮಾಜವನ್ನಾಗಿ ಮಾಡಬೇಕು. ಜನರಲ್ಲಿ ಮತ್ತು ಯುವಜನರಲ್ಲಿ ಈ ಬಗ್ಗೆ ಜಾಗೃತಿ ಮೂಡಬೇಕು ಎಂದು ತಿಳಿಸಿದರು.

ಭಾರತ ಏಡ್ಸ್ ಪ್ರಕರಣಗಳಲ್ಲಿ ವಿಶ್ವದಲ್ಲಿಯೇ 3 ನೇ ಸ್ಥಾನದಲ್ಲಿದೆ. ನಾವು ಹೆಚ್ಚು ಜಾಗೃತರಾಗುವುದು ಅವಶ್ಯ. ರೋಗಿಗಳೊಂದಿಗೆ ಮಾತನಾಡಿದರೆ ರೋಗ ಬರುತ್ತದೆ ಎಂದು ಕೆಲವರಿಗೆ ತಪ್ಪು ತಿಳುವಳಿಕೆಗಳಿವೆ. ಹೆಚ್ಚಾಗಿ ರಕ್ತದ ಮೂಲಕವಾಗಿ ಹರಡುತ್ತದೆ. ಇದು ಜನರಿಗೆ ಗೊತ್ತಿರಬೇಕು. ಗೊತ್ತಿಲ್ಲದಿದ್ದರೆ ಕಾಯಿಲೆ ತಡೆಗಟ್ಟಲು ಸಾಧ್ಯ. ಏಡ್ಸ್ ರೋಗ ಬಂದರೆ ತಕ್ಷಣ ಏನೂ ಆಗೋಲ್ಲ. ಆದರೆ ಇದು ವಾಸಿಯಾಗದ ರೋಗ. ಇಷ್ಟೆಲ್ಲಾ ವಿಜ್ಞಾನದ ಬೆಳವಣಿಗೆಯಾದರೂ ಏಡ್ಸ್, ರೋಗಕ್ಕೆ ಮಾತ್ರ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಆರೋಗ್ಯ ಇಲಾಖೆಯವರು ಈ ಬಗ್ಗೆ ಸಂಶೋಧನೆಗಳನ್ನು ಹೆಚ್ಚು ಹೆಚ್ಚು ಮಾಡಬೇಕು ಎಂದರು.

ಸಮಾರಂಭದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಎಪಿಎಸ್ ಅಧ್ಯಕ್ಷ ಅಭಯ್ ಸಿಂಗ್, ಸಂಜನಾ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

 

andolanait

Recent Posts

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

41 mins ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

43 mins ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

44 mins ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

47 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ನಿರ್ಮಾಪಕರ ಸಂಘ, ವಾಣಿಜ್ಯ ಮಂಡಳಿ ಚುನಾವಣೆ, ಚಿತ್ರನಗರಿ, ಒಟಿಟಿ ವರ್ತಮಾನ

ಹೊಸ ವರ್ಷದಲ್ಲಿ ಕನ್ನಡ ಚಿತ್ರರಂಗದ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ನಿರ್ಮಾಪಕರ ಸಂಘ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಗಳ ಚುನಾವಣೆಯ ಬಿರುಸು,…

52 mins ago

ಚಳಿ ಇರುವಾಗಲೇ ದಿನಕ್ಕೊಂದು ‘ಅಗ್ನಿ ಕರೆ’

ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…

59 mins ago