Mysore
20
broken clouds

Social Media

ಗುರುವಾರ, 26 ಡಿಸೆಂಬರ್ 2024
Light
Dark

ಉಪ ಚುನಾವಣೆ: ಶಿಗ್ಗಾವಿಯಲ್ಲಿ ಭರತ್‌ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್‌

ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್‌ ಘೋಷಿಸಿದೆ.

ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್‌ ಬೊಮ್ಮಾಯಿ ಪುತ್ರ ಭರತ್‌ ಬೊಮ್ಮಾಯಿ, ಬಳ್ಳಾರಿಯ ಸಂಡೂರಿಗೆ ಎಸ್‌ಟಿ ಮೋರ್ಚಾ ರಾಜ್ಯಾದ್ಯಕ್ಷ ಬಂಗಾರು ಹನುಮಂತು ಅವರಿಗೆ ಟಿಕೆಟ್‌ ನೀಡಲಾಗಿದೆ.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಅವರು ಹಾವೇರಿ ಲೋಕಾಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಶಾಸಕ ಸ್ಥಾನ ತೆರವಾಗಿತ್ತು. ಇನ್ನೂ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆಲುವು ಸಾಧಿಸಿದ್ದರಿಂದ ಸಂಡೂರು ಕ್ಷೇತ್ರದ ಶಾಸಕ ಸ್ಥಾನವೂ ತೆರವಾಗಿತ್ತು.

ನವೆಂಬರ್‌ 13ರಂದು ಉಪಚುನಾವಣೆ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.

Tags: