ಮೈಸೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ.
ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಬಳ್ಳಾರಿಯ ಸಂಡೂರಿಗೆ ಎಸ್‌ಟಿ ಮೋರ್ಚಾ ರಾಜ್ಯಾದ್ಯಕ್ಷ ಬಂಗಾರು ಹನುಮಂತು ಅವರಿಗೆ ಟಿಕೆಟ್ ನೀಡಲಾಗಿದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹಾವೇರಿ ಲೋಕಾಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಹಿನ್ನೆಲೆ ಶಾಸಕ ಸ್ಥಾನ ತೆರವಾಗಿತ್ತು. ಇನ್ನೂ ಸಂಡೂರು ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಈ ತುಕಾರಾಂ ಅವರು ಬಳ್ಳಾರಿಯಿಂದ ಗೆಲುವು ಸಾಧಿಸಿದ್ದರಿಂದ ಸಂಡೂರು ಕ್ಷೇತ್ರದ ಶಾಸಕ ಸ್ಥಾನವೂ ತೆರವಾಗಿತ್ತು.
ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, 23ರಂದು ಫಲಿತಾಂಶ ಪ್ರಕಟವಾಗಲಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…