ರಾಜ್ಯ

ಉಪಚುನಾವಣೆ ಸಿಎಂಗೆ ಕಬ್ಬಿಣದ ಕಡಲೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ದಾವಣಗೆರೆ: ಈ ಉಪಚುನಾವಣೆಗಳು ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಈ ಕುರಿತು ದಾವಣಗೆರೆಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಗ್ಯಾರಂಟಿಯ ಮುಖವಾಡ ಧರಿಸಿ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದರು. ಈ ಉಪ ಚುನಾವಣೆಗಳು ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿಗಳಿಗೆ ಕಬ್ಬಿಣದ ಕಡಲೆ ಆಗಿ ಪರಿವರ್ತನೆ ಆಗಿವೆ. ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ- ಇವೆರಡರ ಪೈಕಿ ಯಾವ ಕ್ಷೇತ್ರ ಉಳಿಸಿಕೊಳ್ಳಬೇಕೆಂದು ಮುಖ್ಯಮಂತ್ರಿಗಳು ಅವರ ಸಚಿವಸಂಪುಟದ ಸದಸ್ಯರು ಗಲಿಬಿಲಿಗೊಂಡಿದ್ದಾರೆ ಎಂದು ವಿಶ್ಲೇಷಿಸಿದರು.

ದಾವಣಗೆರೆಯಲ್ಲಿನ ಮತದಾರರ ಆಕ್ರೋಶವು ಮುಂದಿನ ದಿನಗಳಲ್ಲಿ ರಾಜಕೀಯ ಯಾವ ನಿಟ್ಟಿನಲ್ಲಿ ಸಾಗಲಿದೆ ಎಂಬುದನ್ನು ತೋರಿಸಿಕೊಡುತ್ತದೆ ಎಂದು ಪ್ರಶ್ನೆಗೆ ಉತ್ತರಿಸಿದರು. ಇದು ಬಿಜೆಪಿಗೆ ವರದಾನ ಆಗಲಿದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಬಗ್ಗೆ ಮೊಸಳೆಕಣ್ಣೀರು ಹಾಕುವುದು ಅಲ್ಪಸಂಖ್ಯಾತರಿಗೂ ಅರಿವಾಗಿದೆ ಎಂದು ತಿಳಿಸಿದರು.

17 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಸಿದ್ದರಾಮಯ್ಯನವರ ಅನುಭವವನ್ನು ರಾಜ್ಯದ ಅಭಿವೃದ್ಧಿಗೆ ಬಳಸಲು ಸಾಧ್ಯವಾಗಿಲ್ಲ. ರಾಜ್ಯದಲ್ಲಿ ಉಪ ಚುನಾವಣೆ ನಾನಾ ಕಾರಣಕ್ಕೆ ಸುದ್ದಿ ಮಾಡಿದೆ. ಮುಖ್ಯಮಂತ್ರಿಗಳ ನಿದ್ದೆಗೆಡಿಸುವ ಕೆಲಸವನ್ನೂ ಈ ಚುನಾವಣೆಗಳು ಮಾಡಿವೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ಇದ್ದರೂ ತನ್ನ ಗ್ಯಾರಂಟಿಗಳೇ ಅಭಿವೃದ್ಧಿ ಎಂದು ಬಿಂಬಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತ ಬಂದಿದೆ ಎಂದು ಆಕ್ಷೇಪಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

3 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

3 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

3 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

3 hours ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

3 hours ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

3 hours ago