Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಉಪ ಚುನಾವಣೆ : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ದಿನಾಂಕ ಘೋಷಣೆ

ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ.

ಈ ವೇಳೆ ಕರ್ನಾಟಕ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ(ಹಾವೇರಿ ಜಿಲ್ಲೆ), ಸಂಡೂರು(ಬಳ್ಳಾರಿ ಜಿಲ್ಲೆ) ಹಾಗೂ ಚನ್ನಪಟ್ಟಣ(ರಾಮನಗರ ಜಿಲ್ಲೆ) ಕ್ಷೇತ್ರಗಳಿಗೆ ನವೆಂಬರ್‌ 13 ರಂದು ಚುನಾವಣೆ ನಡೆಸಲಾಗುವುದು. ಅಂತೆಯೇ ಚುನಾವಣಾ ಮತ ಎಣಿಕೆಯನ್ನು ನವೆಂಬರ್‌ 23ರಂದು ಈ ಮೂರು ಕ್ಷೇತ್ರಗಳಲ್ಲಿಯೂ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.

ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅ.18 ರಂದು ಉಪಚುನಾವಣೆಯ ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳಿಗೆ ಅಕ್ಟೋಬರ್‌ 25 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳ ನಾಮಪತ್ರವನ್ನು ಅ.28 ರಂದು ಪರಿಶೀಲನೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯಲು ಅ.30ರಂದು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಯಾಕಾಗಿ ಉಪ ಚುನಾವಣೆ?
ಚನ್ನಪಟ್ಟಣ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆ, ಶಾಸಕ ಸ್ಥಾನ ತೆರವಾಗಿತ್ತು. ಶಿಗ್ಗಾಂವಿಯಲ್ಲಿಯೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಸಂಸದರಾಗಿ ಆಯ್ಕೆಯಾಗಿರುವುದರಿಂದ ಈ ಎರಡೂ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ತೆರವಾಗಿತ್ತು. ಇನ್ನು ಶಾಸಕ ಇ.ತುಕಾರಾಂ ಅವರು ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನೂ ನಡೆಸಲಾಗುತ್ತಿದೆ.

Tags: