ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ.
ಈ ವೇಳೆ ಕರ್ನಾಟಕ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ(ಹಾವೇರಿ ಜಿಲ್ಲೆ), ಸಂಡೂರು(ಬಳ್ಳಾರಿ ಜಿಲ್ಲೆ) ಹಾಗೂ ಚನ್ನಪಟ್ಟಣ(ರಾಮನಗರ ಜಿಲ್ಲೆ) ಕ್ಷೇತ್ರಗಳಿಗೆ ನವೆಂಬರ್ 13 ರಂದು ಚುನಾವಣೆ ನಡೆಸಲಾಗುವುದು. ಅಂತೆಯೇ ಚುನಾವಣಾ ಮತ ಎಣಿಕೆಯನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳಲ್ಲಿಯೂ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಅ.18 ರಂದು ಉಪಚುನಾವಣೆಯ ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳಿಗೆ ಅಕ್ಟೋಬರ್ 25 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳ ನಾಮಪತ್ರವನ್ನು ಅ.28 ರಂದು ಪರಿಶೀಲನೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ನಾಮಪತ್ರ ಹಿಂಪಡೆಯಲು ಅ.30ರಂದು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಯಾಕಾಗಿ ಉಪ ಚುನಾವಣೆ?
ಚನ್ನಪಟ್ಟಣ ಕ್ಷೇತ್ರದ ಶಾಸಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿರುವ ಹಿನ್ನೆಲೆ, ಶಾಸಕ ಸ್ಥಾನ ತೆರವಾಗಿತ್ತು. ಶಿಗ್ಗಾಂವಿಯಲ್ಲಿಯೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಸಂಸದರಾಗಿ ಆಯ್ಕೆಯಾಗಿರುವುದರಿಂದ ಈ ಎರಡೂ ಕ್ಷೇತ್ರಗಳಲ್ಲಿ ಶಾಸಕ ಸ್ಥಾನ ತೆರವಾಗಿತ್ತು. ಇನ್ನು ಶಾಸಕ ಇ.ತುಕಾರಾಂ ಅವರು ರಾಜೀನಾಮೆಯಿಂದ ತೆರವಾಗಿರುವ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆಯನ್ನೂ ನಡೆಸಲಾಗುತ್ತಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…