ಬೆಂಗಳೂರು : ಭಾರತೀಯ ಚುನಾವಣಾ ಆಯೋಗವು(ಇಸಿಐ) ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕವನ್ನು ಭಾನುವಾರ ಪ್ರಕಟಿಸಿದೆ.
ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಕರ್ನಾಟಕ ರಾಜ್ಯದ ದಾವಣಗೆರೆ ಹಾಗೂ ಬಾಗಲಕೋಟೆಯ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯು ಏಪ್ರಿಲ್ 9 ರಂದು ನಡೆಯಲಿದೆ. ಮೇ 4 ರಂದು ಫಲಿತಾಂಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ಹಾಗೂ ಶಾಸಕ ಎಚ್.ವೈ.ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಈ ಉಪಚುನಾವಣೆಗಳು ರಾಜಕೀಯವಾಗಿ ಮಹತ್ವದ್ದಾಗಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಈಗಾಗಲೇ ಅಭ್ಯರ್ಥಿ ಆಯ್ಕೆ ಮತ್ತು ತಯಾರಿಯಲ್ಲಿ ತೊಡಗಿವೆ.
ಆಯೋಗವು ಇತರ ರಾಜ್ಯಗಳಲ್ಲಿ (ಗೋವಾ, ಗುಜರಾತ್, ಮಹಾರಾಷ್ಟ್ರ, ನಾಗಾಲ್ಯಾಂಡ್, ತ್ರಿಪುರಾ) ಒಟ್ಟು 8 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದ್ದು, ಎಲ್ಲಾ ಉಪಚುನಾವಣೆಗಳ ಫಲಿತಾಂಶಗಳೂ ಮೇ 4ರಂದು ಪ್ರಕಟವಾಗಲಿದೆ.





