ಬಾಗಲಕೋಟೆ: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬಾಗಲಕೋಟೆಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ನೂರಕ್ಕೆ ನೂರರಷ್ಟು ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.
ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಕಾಂಗ್ರೆಸ್‌ನವರೇ ಸರ್ಕಾರ ಕೆಡವಿದ್ದರು. ರಾಜ್ಯದಲ್ಲಿ ಈಗಲೂ ಕಾಂಗ್ರೆಸ್ ನಾಯಕರಿಂದಲೇ ಸರ್ಕಾರ ಬೀಳುತ್ತದೆ. ಅಧಿಕಾರ ಹಸ್ತಾಂತರ ವಿಷಯದಲಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ. ಹೀಗಾಗಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಹೇಳಿದರು.
ಸಚಿವ ಕೆ.ಎನ್.ರಾಜಣ್ಣ ಕೂಡ ರಾಜ್ಯದಲ್ಲಿ ಕ್ರಾಂತಿಯಾಗಲಿದೆ ಎಂದು ಹೇಳಿದ್ದಾರೆ. ಸಚಿವ ರಾಜಣ್ಣ ಅವರ ಮಾತು ಕೇಳಿದರೆ ಸರ್ಕಾರ ಪತನವಾಗಲಿದೆ. ರಾಜ್ಯದಲ್ಲಿ ನಾವು ಮತ್ತೆ ಬಿಜೆಪಿ ಬಾವುಟ ಹಾರಿಸುವ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.





