Mysore
33
clear sky

Social Media

ಗುರುವಾರ, 05 ಮಾರ್ಚ್ 2026
Light
Dark

ಎರಡು ಕ್ಷೇತ್ರದ ಉಪಚುನಾವಣೆ: ಸಿಎಂ, ಡಿಸಿಎಂ ಮಹತ್ವದ ಸಭೆ

ಬೆಂಗಳೂರು: ಕಾಂಗ್ರೆಸ್‌ ಶಾಸಕರ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ ಆಗಲಿದೆ.

ಈ ಹಿನ್ನೆಲೆಯಲ್ಲಿ ಉಪಚುನಾವಣೆ ಗೆದ್ದು ಕ್ಷೇತ್ರ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಪ್ರತಿಷ್ಠೆಯಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನದ ಕಾರಣ ದಾವಣಗೆರೆ ದಕ್ಷಿಣ ಹಾಗೂ ಎಚ್.ವೈ.ಮೇಟಿ ನಿಧನದ ಕಾರಣ ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಎದುರಾಗಿದೆ.

ಎರಡು ಕ್ಷೇತ್ರದ ಅಭ್ಯರ್ಥಿಗಳನ್ನು ಕಾಂಗ್ರೆಸ್‌ ಪಕ್ಷ ಘೋಷಣೆ ಮಾಡಿಲ್ಲ. ಟಿಕೆಟ್‌ಗಾಗಿ ತೀವ್ರ ಪೈಪೋಟಿ ಇದ್ದು, ಅಭ್ಯರ್ಥಿ ಅಂತಿಮಗೊಳಿಸುವುದು ಸವಾಲಾಗಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸಭೆ ನಡೆಸಿದ್ದು, ಅಭ್ಯರ್ಥಿ ಆಯ್ಕೆ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ.

Tags:
error: Content is protected !!