ಬೆಂಗಳೂರು: ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುರ ಬಿ.ವೈ.ರಾಘವೇಂದ್ರ ಅವರಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಈ ಕುರಿತು ಸ್ಪಷ್ಟನೆ ನೀಡಿರುವ ರಾಘವೇಂದ್ರ ಅವರು, ಮಗನ ಮದುವೆ ಇದೆ. ಅದಕ್ಕೆ ಆಮಂತ್ರಣ ನೀಡಲು ಬಂದಿದ್ದೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ಮಾಡಿದ್ದೇನೆ. ಭೇಟಿಗೆ ಡಿಕೆಶಿ ಅವರು ಸಮಯ ನೀಡಿದ್ದರು. ಅದರಂತೆ ಇಂದು ಭೇಟಿ ಮಾಡಿದ್ದೇನೆ. ಮದುವೆಗೆ ಬರುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಇದನ್ನೂ ಓದಿ:- ಆರ್‌ಎಸ್‌ನವರೇ ಮೋದಿಯನ್ನು ತೆಗೆಯಬೇಕು ಎಂದುಕೊಂಡಿದ್ದಾರೆ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ
ವೈಯಕ್ತಿಕ ವಿಚಾರಕ್ಕೆ ಮಾತ್ರ ನಾನು ಭೇಟಿ ಮಾಡಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನು ಇಲ್ಲ. ಅಧಿಕಾರದಲ್ಲಿದ್ದಾಗ, ಸರ್ಕಾರ ಇದ್ದಾಗ ಪಕ್ಷ ಬೇಧ ಮರೆತು ಭೇಟಿ ಮಾಡುವುದು ಸಾಮಾನ್ಯ. ಅದರಂತೆ ಬಿಜೆಪಿಯ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ್ ಭೇಟಿ ಮಾಡಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇದನ್ನೂ ಓದಿ:- ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಿ ನರೇಂದ್ರ ಮೋದಿ: ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ





