ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಪದಾಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚೆಗಳು ನಡೆದವು.
ಇನ್ನು ಇತ್ತೀಚೆಗೆ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಸರ್ಕಾರ 40 ಸಾವಿರ ಕೋಟಿ ಹಗರಣವನ್ನು ಕೊವಿಡ್ ಸಂದರ್ಭದಲ್ಲಿ ಮಾಡಿತ್ತು ಎಂಬ ಗಂಭೀರ ಆರೋಪವನ್ನು ಮಾಡಿದ್ದರು. ಈ ಹೇಳಿಕೆ ಬಗ್ಗೆ ಸಹ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ ಹೈಕಮಾಂಡ್ ಈ ವಿಷಯವನ್ನು ನೋಡಿಕೊಳ್ಳಲಿದೆ ಎಂದರು. ಅಲ್ಲದೇ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡಬಾರದೆಂದು ಪದಾಧಿಕಾರಿಗಳಿಗೆ ಬಿವೈ ರಾಘವೇಂದ್ರ ಸೂಚಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಯಾವೊಬ್ಬ ಪದಾಧಿಕಾರಿ ಸಹ ವಿಶ್ರಮಿಸುವಂತಿಲ್ಲ, ಬೂತ್ ಕಾರ್ಯಕರ್ತರು, ವರಿಷ್ಠರು ಹಾಗೂ ಹಿರಿಯರನ್ನು ಸಮಾನವಾಗಿ ನೋಡಿಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ಹೇಳಿದರು.