ರಾಜ್ಯ

ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಬಿಎಸ್‌ವೈ ವಿರುದ್ಧ ಯತ್ನಾಳ್‌ ಮಾಡಿದ್ದ ಆರೋಪ ಪ್ರಸ್ತಾಪ

ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಬಳಿಕ ಇದೇ ಮೊದಲ ಬಾರಿಗೆ ಪದಾಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಪಕ್ಷ ಸಂಘಟನೆಯ ಕುರಿತು ಚರ್ಚೆಗಳು ನಡೆದವು.

ಇನ್ನು ಇತ್ತೀಚೆಗೆ ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌ ಬಿಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಬಿಜೆಪಿ ಸರ್ಕಾರ 40 ಸಾವಿರ ಕೋಟಿ ಹಗರಣವನ್ನು ಕೊವಿಡ್‌ ಸಂದರ್ಭದಲ್ಲಿ ಮಾಡಿತ್ತು ಎಂಬ ಗಂಭೀರ ಆರೋಪವನ್ನು ಮಾಡಿದ್ದರು. ಈ ಹೇಳಿಕೆ ಬಗ್ಗೆ ಸಹ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಯಿತು.

ಇದಕ್ಕೆ ಪ್ರತಿಕ್ರಿಯಿಸಿದ ಬಿವೈ ವಿಜಯೇಂದ್ರ ಹೈಕಮಾಂಡ್‌ ಈ ವಿಷಯವನ್ನು ನೋಡಿಕೊಳ್ಳಲಿದೆ ಎಂದರು. ಅಲ್ಲದೇ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆಗಳನ್ನು ನೀಡಬಾರದೆಂದು ಪದಾಧಿಕಾರಿಗಳಿಗೆ ಬಿವೈ ರಾಘವೇಂದ್ರ ಸೂಚಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಯಾವೊಬ್ಬ ಪದಾಧಿಕಾರಿ ಸಹ ವಿಶ್ರಮಿಸುವಂತಿಲ್ಲ, ಬೂತ್‌ ಕಾರ್ಯಕರ್ತರು, ವರಿಷ್ಠರು ಹಾಗೂ ಹಿರಿಯರನ್ನು ಸಮಾನವಾಗಿ ನೋಡಿಕೊಳ್ಳಬೇಕು ಎಂದು ಬಿವೈ ವಿಜಯೇಂದ್ರ ಹೇಳಿದರು.

andolana

Recent Posts

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

1 hour ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

4 hours ago

ವೈಭವದ ವಸಂತ ಮಹಲ್‌ಗೆ ಬೇಕಿದೆ ಕಾಯಕಲ್ಪ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…

6 hours ago

ವಿರಾಜಪೇಟೆ | ಅವಘಡಕ್ಕಾಗಿ ಕಾಯುತ್ತಿದೆ ಮಾರುಕಟ್ಟೆ ಹಳೇ ಕಟ್ಟಡ..!

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ…

6 hours ago

ಗುಂಡ್ಲುಪೇಟೆ | ಶಿಥಿಲಗೊಂಡಿರುವ ಅಂಗನವಾಡಿ, ಶಾಲೆ ಕಟ್ಟಡಗಳು

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ…

6 hours ago