ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದಧ ಬಿಜೆಪಿ ನಾಯಕರು ಬೆಂಗಳೂರಿನಲ್ಲಿಂದು “ಮೈಸೂರು ಚಲೋ” ಪ್ರತಿಭಟನೆ ನಡೆಸಿದರು.
ಬಿಜೆಪಿ ಜೆಡಿಎಸ್ ಮೈತ್ರಿ ಒಳಗೊಂಡಂತೆ ಎರಡೂ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಸರ್ಕಾರ, ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು.
ರಾಮನಗರ ಮಾರ್ಗವಾಗಿ ಮೈಸೂರು ರಸ್ತೆಯಲ್ಲಿ ಮೈಸೂರಿಗೆ ಹೊರಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮುನಿರತ್ನ ಅವರನ್ನು ಮಾರ್ಗಮಧ್ಯೆಯಲ್ಲಿಯೇ ಪೊಲೀಸರು ತಡೆದರು. ಬಳಿಕ ಅವರನ್ನು ಜೈಲಿನಲ್ಲಿ 20 ನಿಮಿಷಗಳಿಗೂ ಹೆಚ್ಚುಕಾಲ ಬಂಧನದಲ್ಲಿರಿಸಿ ಬಳಿಕ ಬಿಡುಗಡೆಗೊಳಿಸಿದರು.





