ಬೆಂಗಳೂರು: ಶಿವಮೊಗ್ಗ ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಸದೇ ತಾಕತ್ತಿದ್ದರೇ ಚುನಾವಣೆಯಲ್ಲಿ ತಮ್ಮ ಮಗನನ್ನು ಗೆಲ್ಲಿಸಿಕೊಳ್ಳಲಿ ಎಂದು ಸವಾಲಾಕಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಅವರಲ್ಲದೇ ಮತ್ಯಾರು ಮೋದಿ ಫೋಟೋ ಬಳಸಲು ಸಾಧ್ಯ ಎಂದು ಟಾಂಗ್ ನೀಡಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪ ಅವರ ಮಾತುಕೇಳಿ ನನಗೆ ಗಾಬರಿಯಾಯಿತು. ಬಿಜೆಪಿಯವರಾದ ನಾವು ಮೋದಿ ಚಿತ್ರ ಬಳಸದೇ ಮತ್ಯಾರು ಬಳಸಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತು ಬಿಜೆಪಿಯ ಹೆಮ್ಮೆಯಾಗಿದ್ದಾರೆ. ಅವರ ಫೋಟೋವನ್ನು ನಾವು ಬಳಸದೇ ಬೇರೆ ಯಾರು ಬಳಸಬೇಕು ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಶಿವಮೊಗ್ಗ ಚುನಾವಣೆಯಲ್ಲಿ ನಾವು ಎರಡು ಅಂಶಗಳ ಮೇಲೆ ಮತಯಾಚನೆ ಮಾಡುತ್ತಿದ್ದೇವೆ. ಮೊದಲನೆಯದಾಗಿ ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆ ಆಧಾರದಲ್ಲಿ ಮತ್ತೊಂದು ಅಲ್ಲಿನ ಕ್ರೀಯಾಶೀಲಾ ಸಂಸದ ಬಿ.ವೈ ರಾಘವೇಂದ್ರ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದಿಟ್ಟು ಮತಯಾವಚಿಸುತ್ತೇವೆ ಎಂದು ತಿಳಿಸಿದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…