by vijayendra
ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಆರ್‌ಎಸ್‌ಎಸ್ ಮುಖಂಡರ ವಿರುದ್ಧ ಎಫ್‌ಐಆರ್ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ ಹಂಗಿಸುವ ರೀತಿ ಆಡಳಿತ ನಡೆಸುತ್ತಿದೆ. ಸರ್ಕಾರದಿಂದ ನಮ್ಮ ಕಾರ್ಯಕರ್ತರನ್ನು ಅಪಮಾನ ಮಾಡಲಾಗುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳನ್ನು ಇದುವರೆಗೂ ಬಂಧಿಸಿಲ್ಲ. ಇದೇ ರೀತಿ ಮುಂದುವರಿದರೆ ಮುಂದಿನ ಬೆಳವಣಿಗೆಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚಿಸಿದ್ದೇವೆ. ನಾವೆಲ್ಲಾ ಕೈಕಟ್ಟಿ ಕೂರಲ್ಲ. ಸರ್ಕಾರದ ಬೆದರಿಕೆಗೆ ಹೆದರಲ್ಲ. ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರ ವಿರುದ್ಧ ಹಾಕಿರುವ ಕೇಸ್ ವಾಪಸ್ ತೆಗೆದುಕೊಳ್ಳಬೇಕು. ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಸುಮ್ಮನಿರಲ್ಲ ಎಂದು ಕಿಡಿಕಾರಿದರು.
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…
ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…
ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…