ಬೆಂಗಳೂರು: ಮುಖ್ಯಮಂತ್ರಿಗಳಿಗೆ ತಾಕತ್ತಿದ್ದರೆ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಗುತ್ತಿರುವ ಮುಡಾ ಹಗರಣ, ವಾಲ್ಮೀಕಿ ಹಗರಣ ಸೇರಿದಂತೆ ಬೆಲೆ ಏರಿಕೆ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.
ಈ ಹಗರಣಗಳಲ್ಲಿ ಸಿಎಂ ಕುಟುಂಬವೇ ಪಾಲುದಾರರಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಾವಿರಾರು ಕೋಟಿ ಬೆಲೆಬಾಳುವ ನಿವೇಶನಗಳಿಗೆ ಸಂಬಂಧಿಸಿದಂತೆ ಮೈಸೂರು ಮುಡಾ ಹಗರಣ ನಡೆದಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಸಿಎಂ ಸಿದ್ದರಾಮಯ್ಯ ಅವರು, ದಲಿತರು ಸೇರಿದಂತೆ ಎಲ್ಲಾ ಸಮುದಾಯವದರಿಗೂ ಅನ್ಯಾಯ ಮಾಡಿದ್ದಾರೆ. ಎಲ್ಲಾ ಕಡೆ ಹಣ ಲೂಟಿ ಹೊಡೆದು, ಅದೇ ಮೊತ್ತದಲ್ಲಿ ಲೋಕಸಭಾ ಚುನಾವಣೆ ನಡೆಸಿದ್ದಾರೆ. ಈ ಹಗರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯ ಮಾಡಿದರು.
ಮುಡಾದಲ್ಲಿ ಯಾವ ಯಾವ ಸರ್ಕಾರದಲ್ಲಿ ಹಗರಣ ನಡೆದಿದ್ದರೂ ಎಲ್ಲವನ್ನು ಸೇರಿಸಿ ಸಿಬಿಐ ತನಿಖೆಗೆ ಒಪ್ಪಿಸಿ. ಸಿಎಂ ಕುಟುಂಬವೇ ಈ ಹಗರಣದಲ್ಲಿ ಭಾಗಿಯಾಗಿದೆ. ನಿಮಗೆ ಬೇಕಾದಂತೆ ನಿವೃತ್ತ ನ್ಯಾಯಾಧೀಶರಿಂದ ತನಿಖೆ ಮಾಡಿದರೆ ಸಾಕಾಗಲ್ಲ. ಸಿಬಿಐಗೆ ಕೊಡಲೇಬೇಕು ಎಂದು ಆಗ್ರಹಿಸಿದರು.
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…
ವಿಶಾಖಪಟ್ಟಣ : ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ತನ್ನ ಪ್ರೇಯಸಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದಾನೆ. ಅಲ್ಲದೇ,…
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…