ಬೆಂಗಳೂರು: ಕಾಂಗ್ರೆಸ್ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ರಾಜೀನಾಮೆ ಕೇಳಿ ಅವರ ಸಂತೋಷಕ್ಕೆ ಅವರೇ ವಿಘ್ನ ತಂದುಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಕ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ ಲೋಕಸಭಾ ಚುನಾವಣೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ. ಹೀಗಾಗಿ ಪ್ರಲ್ಹಾದ್ ಜೋಶಿ ಅವರು ರಾಜೀನಾಮೆ ನೀಡಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಆಗ್ರಹಿಸಿದ್ದರು. ಹೀಗಾಗಿ ದಿನೇಶ್ ಅವರ ವಿರುದ್ಧ ಟ್ವೀಟ್ ಮಾಡಿ ಪೋಸ್ಟ್ ಮಾಡಿದ್ದಾರೆ.
ವಿಜಯೇಂದ್ರ ಅವರ ಟ್ವೀಟ್‌ನಲ್ಲಿ ಏನಿದೆ?
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ಸಂತೋಷ ಪಡಲು ಹೊರಟಿದ್ದಾರೆ. ಸಚಿವ ದಿನೇಶ್ ಗುಂಡೂರಾವ್ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಆರೋಪಿ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಪ್ರಲ್ಹಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.
ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ. ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಶಿಯವರ ವಿಚಾರದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ ಎಂದಿದ್ದಾರೆ.
ಪ್ರಲ್ಹಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ, ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ. ಆಧಾರರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ ಎಂದು ತಿಳಿಸಿದ್ದಾರೆ.
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರು ಆಕ್ಷೇಪಾರ್ಹ ನೀಡಿರುವ ಹೇಳಿಕೆಯ ಕೇಸ್…
ಶಿವರಾಜಕುಮಾರ್ ಶಸ್ತ್ರಚಿಕಿತ್ಸೆಗೆಂದು ಇತ್ತೀಚೆಗೆ ಅಮೇರಿಕಾಗೆ ಪ್ರಯಾಣ ಬೆಳಸಿದ್ದಾರೆ. ಜನವರಿ 26ರಂದು ಅವರು ಚಿಕಿತ್ಸೆ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಬೆಂಗಳೂರಿಗೆ ವಾಪಸ್ಸಾಗಿ…
ವಿಜಯ್ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವಿಶೇಷವೆಂದರೆ, ‘ಕೇಸ್ ಆಫ್ ಕೊಂಡಾನ’, ‘ಜಾಗ್ 101’ ಮತ್ತು…
• ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕು ವ್ಯಾಪ್ತಿಯಲ್ಲಿ ಪಟ್ಟಣ ಅಭಿವೃದ್ಧಿಯಾದಂತೆ ಕಳ್ಳತನವೂ ಹೆಚ್ಚಳ; ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ…
ವಡೆಯನಪುರ ಸಮೀಪದ ಕೆರೆ ಒಡೆಯುವ ಆತಂಕ; ಏರಿಯನ್ನು ದುರಸ್ತಿಪಡಿಸಲು ಒತ್ತಾಯ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ವಡೆಯನಪುರದ ಸಮೀಪವಿರುವ…
• ರಮೇಶ್ ಪಿ.ರಂಗಸಮುದ್ರ ಪಕ್ಷಿಗಳಿಗೂ ಕೃಷಿಗೂ ಅವಿನಾಭಾವ ಸಂಬಂಧವಿದೆ. ಪಕ್ಷಿಗಳು ಮಾನವನಿಗಿಂತಲೂ ಹೆಚ್ಚಾಗಿ ಪ್ರಕೃತಿಯೊಡನೆ ಬೆರೆತಿವೆ. ಸಸ್ಯ ವೈವಿಧ್ಯತೆಯ ನಡುವೆ…