ರಾಜ್ಯ

ಪ್ರಲ್ಹಾದ್‌ ಜೋಶಿ ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ಕಾಂಗ್ರೆಸ್‌ ನಾಯಕರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ರಾಜೀನಾಮೆ ಕೇಳಿ ಅವರ ಸಂತೋಷಕ್ಕೆ ಅವರೇ ವಿಘ್ನ ತಂದುಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಕ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯೇಂದ್ರ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಸಹೋದರ ಗೋಪಾಲ ಜೋಶಿ ಲೋಕಸಭಾ ಚುನಾವಣೆ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದಾರೆ. ಹೀಗಾಗಿ ಪ್ರಲ್ಹಾದ್ ಜೋಶಿ ಅವರು ರಾಜೀನಾಮೆ ನೀಡಬೇಕು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಅವರು ಆಗ್ರಹಿಸಿದ್ದರು. ಹೀಗಾಗಿ ದಿನೇಶ್‌ ಅವರ ವಿರುದ್ಧ ಟ್ವೀಟ್‌ ಮಾಡಿ ಪೋಸ್ಟ್‌ ಮಾಡಿದ್ದಾರೆ.‌

ವಿಜಯೇಂದ್ರ ಅವರ ಟ್ವೀಟ್‌ನಲ್ಲಿ ಏನಿದೆ?
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಸರನ್ನು ಸಂಬಂಧಪಡದ ಪ್ರಕರಣವೊದರಲ್ಲಿ ಎಳೆದು ತರುವ ಮೂಲಕ ಕಾಂಗ್ರೆಸ್ಸಿಗರು ಸಂತೋಷ ಪಡಲು ಹೊರಟಿದ್ದಾರೆ. ಸಚಿವ ದಿನೇಶ್‌ ಗುಂಡೂರಾವ್‌ ಅವರು ಅಸಂಬದ್ಧವಾಗಿ ಜೋಶಿಯವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.

ಆರೋಪಿ ಗೋಪಾಲ ಜೋಶಿ ಅವರೊಂದಿಗೆ ಕಳೆದ 32 ವರ್ಷಗಳಿಂದಲೂ ಸಂಪರ್ಕ ಕಡಿದುಕೊಂಡು ಯಾರೊಂದಿಗೂ ತಮ್ಮ ಸಂಬಂಧ ಬೆರೆಸದಂತೆ ಪ್ರಲ್ಹಾದ್ ಜೋಶಿ ಅವರು ನ್ಯಾಯಾಲಯದಲ್ಲಿ 2013ರಲ್ಲೇ ತಡೆಯಾಜ್ಞೆ ತಂದಿದ್ದಾರೆ. ಅಲ್ಲದೇ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಅದರ ವಿವರವಿರುವುದಾಗಿಯೂ ಸ್ಪಷ್ಟಪಡಿಸಿದ್ದಾರೆ.

ಇಷ್ಟಾಗಿಯೂ ಮುಡಾ ಹಾಗೂ ಮಹರ್ಷಿ ವಾಲ್ಮೀಕಿ ನಿಗಮದ ಹಗರಣದಂತೆ ಹತ್ತು ಹಲವು ಹಗರಣಗಳಲ್ಲಿ ಸಿಲುಕಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಹಾಗೂ ಇತರ ಮಂತ್ರಿಗಳು ನೈತಿಕತೆ ಗಾಳಿಗೆ ತೂರಿ ತಮ್ಮ ಸ್ಥಾನಗಳಿಗೆ ಭಂಡತನದಿಂದ ಅಂಟಿ ಕುಳಿತಿದ್ದಾರೆ. ಹತಾಶೆಯ ಅಂಚಿಗೆ ತಲುಪಿರುವ ಕಾಂಗ್ರೆಸ್ಸಿಗರು ಜೋಶಿಯವರ ವಿಚಾರದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕಲು ಹೊರಟಿದ್ದಾರೆ ಎಂದಿದ್ದಾರೆ.

ಪ್ರಲ್ಹಾದ್ ಜೋಶಿ ಅವರು ತಮ್ಮ ಇಡೀ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಮಸಿ ಅಂಟಿಸಿಕೊಂಡವರಲ್ಲ‌, ಅವರ ಸಾಮರ್ಥ್ಯ ಹಾಗೂ ಅನುಭವವನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸಂಪುಟದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಟ್ಟಿದ್ದಾರೆ. ಇದನ್ನು ಸಹಿಸದ ಕೆಲವು ರಾಜಕೀಯ ಪಟ್ಟಭದ್ರಾ ಹಿತಾಸಕ್ತಿಗಳು ಜೋಶಿ ಅವರಿಗೆ ಕಳಂಕ ಅಂಟಿಸುವ ವಿಫಲ ಯತ್ನ ನಡೆಸಿದ್ದಾರೆ. ಆಧಾರರಹಿತ ಆರೋಪಗಳಿಂದ ಭಾರತೀಯ ಜನತಾ ಪಾರ್ಟಿಯ ವರ್ಚಸ್ಸಿಗೆ ಧಕ್ಕೆ ತರಬಹುದು ಎಂದು ಕಾಂಗ್ರೆಸ್ಸಿಗರು ಅಂದುಕೊಂಡಿದ್ದರೆ ಅದು ಕೇವಲ ಅವರ ಭ್ರಮೆ ಅಷ್ಟೇ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

1 hour ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

2 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

3 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

3 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

9 hours ago

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…

9 hours ago