ಹುಬ್ಬಳ್ಳಿ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ದಸರಾ ಮಹೋತ್ಸವ ಮುಗಿದ ನಂತರ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿಕೆ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ವೈ.ವಿಜಯೇಂದ್ರ ಏನು ಪುರೋಹಿತನಾ ಅಥವಾ ಜೋತಿಷ್ಯಿನಾ? ದಸರಾ ಮುಗಿಯಿತು ಅಲ್ವಾ ನಾನು ರಾಜೀನಾಮೆ ನೀಡಿದ್ದೇನಾ, ಇಲ್ಲವಲ್ಲಾ. ಯಡಿಯೂರಪ್ಪ ಅವರೇ ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಹೀಗಾಗಿ ನನ್ನನ್ನು ರಾಜೀನಾಮೆ ನೀಡಿ ಎಂದು ಕೇಳುವ ಯಾವ ನೈತಿಕತೆಯೂ ಇಲ್ಲ. ಮೊದಲು ವಿಜಯೇಂದ್ರನೇ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.