Mysore
19
overcast clouds
Light
Dark

ಜನರ ಸಮಸ್ಯೆ ಕೇಳೋದು ಬಿಟ್ಟು ಸಚಿವರ ಮೂಲಕ ಡಿಸಿಎಂ ಹುದ್ದೆ ವಿಚಾರ ಎತ್ತಿಸಿದ್ದಾರೆ : ಬಿವೈ ವಿಜಯೇಂದ್ರ

ಬೆಂಗಳೂರು : ರಾಜ್ಯ ಸರ್ಕಾರ ಜನರ ಸಮಸ್ಯೆಗಳು ಏನು ಎಂಬುವುದನ್ನ ಕೇಳಿ ಕ್ರಮ ಕೈಗೊಳ್ಳುವುದನ್ನ ಬಿಟ್ಟು ಆಂತರಿಕ ಸಂಘರ್ಷದಲ್ಲೇ ತೊಡಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ.

ನಗರದಲ್ಲಿ ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯನವರೇ ಸಚಿವರ ಮೂಲಕ ಹೆಚ್ಚುವರಿ ಡಿಸಿಎಂ ಹುದ್ದೆ ವಿಚಾರ ಎತ್ತಿಸಿದ್ದಾರೆ. ಜನರ ಸಮಸ್ಯೆ ಆಲಿಸಿ ಕ್ರಮ ಕೈಗೊಳ್ಳುವುದು ಬಿಟ್ಟು ಡಿಕೆಶಿ ಬಲಿ ಕೊಡಲು ಸಚಿವರ ಮೂಲಕ ಡಿಸಿಎಂ ವಿಚಾರ ಎತ್ತಿಸಿದ್ದಾರೆ. ಈಗ ನೋಡಿದ್ರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬುಡಕ್ಕೆ ಬಂದಿದೆ. ಸಿದ್ದರಾಮಯ್ಯನವರು ಎಷ್ಟು ದಿನ ಸಿಎಂ ಆಗಿರುತ್ತಾರೋ ಗೊತ್ತಿಲ್ಲ. ಆದರೆ ರಾಜ್ಯದ ಅಭಿವೃದ್ಧಿ ಜೊತೆಗೆ ಜನರ ಸಮಸ್ಯೆ ಕೇಳಬೇಕಲ್ವಾ? ನಾವು ಇದನ್ನೇ ಕೇಳಿದರೆ ಉಡಾಫೆ ಉತ್ತರ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಸತ್ಯನಾರಾಯಣ ಅವರು ಬಹಳ ಗಂಭೀರವಾದ ಆರೋಪ ಮಾಡಿದ್ದಾರೆ. ಆದರೆ ಇವತ್ತಿನವರೆಗೂ ನಾಗೇಂದ್ರರನ್ನು ಕರೆದು ವಿಚಾರಣೆ ಮಾಡುವ ಧೈರ್ಯವನ್ನು ಎಸ್​ಐಟಿ ತೋರಿಸಿಲ್ಲ. ಗುರುವಾರ ನಿನ್ನೆ ಕೋರ್ಟ್ ಕೂಡಾ ಸರ್ಕಾರಕ್ಕೆ ಛೀಮಾರಿ ಹಾಕಿದೆ ಎಂದು ಹೇಳಿದರು.