ಬೆಂಗಳೂರು: ಹೊಸಪೇಟೆಯಲ್ಲಿ ಕಾಂಗ್ರೆಸ್ ಮೋಜು-ಮಸ್ತಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರು ಇಂದು ಭಾರೀ ಮಳೆಯಿಂದಾಗಿ ಜಲಾವೃತವಾಗಿದೆ. ನಾಲ್ಕೈದು ಜನರ ಜೀವ ಹೋಗಿದೆ. ಆದರೂ ಕಾಂಗ್ರೆಸ್ ಮಾತ್ರ ಹೊಸಪೇಟೆಯಲ್ಲಿ ಮೋಜು ಮಸ್ತಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮಾತಿನಲ್ಲಿ ಗ್ರೇಟರ್ ಬೆಂಗಳೂರು ಅಂದರೆ ಆಗಲ್ಲ. ಮೊದಲು ಬೆಂಗಳೂರಿನಲ್ಲಿ ವಾಸಿಸುತ್ತಿರುವ ಜನರ ಸಮಸ್ಯೆ ಆಲಿಸಿ ಸರಿಮಾಡಿ. ಎಲ್ಲೆಂದರಲ್ಲಿ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಬೆಂಗಳೂರಿನ ಬಗ್ಗೆ ಸರ್ಕಾರಕ್ಕೆ ಕಾಳಜಿಯೇ ಇಲ್ಲ ಎಂದು ಕಿಡಿಕಾರಿದರು.





