Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದೆ: ಬಿ.ವೈ.ವಿಜಯೇಂದ್ರ

by vijayendra verbal attack

ಗದಗ: ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್‌ಗೆ ಭಯ ಶುರುವಾಗಿದ್ದು, ಇದನ್ನು ಮರೆಮಾಚಲು ಜಾತಿಗಣತಿ ವಿಚಾರ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಗದಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ವಿಪಕ್ಷಗಳು ಹಾಗೂ ಸಿಎಂ ಆಕಾಂಕ್ಷಿಗಳನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ:- ಸಿಎಂ ಸ್ವಕ್ಷೇತ್ರದಲ್ಲೇ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿರುವುದು ನಾಚಿಕೆಗೇಡಿನ ಸಂಗತಿ: ಎಂ.ಕೃಷ್ಣಮೂರ್ತಿ

ಸಿಎಂ ಸಿದ್ದರಾಮಯ್ಯ ಕರಪ್ಟ್‌ ರಾಜಕಾರಣಿ. ಮುಡಾ ಹಗರಣಗಳ್ಲಿ ನಾವು ತಪ್ಪು ಎಸಗಿಲ್ಲ ಎಂದರು. ಆದರೆ 14 ನಿವೇಶನಗಳನ್ನು ವಾಪಸ್‌ ಕೊಟ್ಟರು. ಹೀಗಾಗಿ ಸಿದ್ದರಾಮಯ್ಯ ಭ್ರಷ್ಟರು ಎಂದು ಎಲ್ಲರಿಗೂ ಗೊತ್ತಾಗಿದೆ ಎಂದು ಕಿಡಿಕಾರಿದರು.

ಇದನ್ನೂ ಓದಿ:- ಮಾಜಿ ಸಿಎಂ ಬಿಎಸ್‌ವೈ ವಿರುದ್ಧದ ಡಿನೋಟಿಫಿಕೇಷನ್‌ ಪ್ರಕರಣ: ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿದ ಸುಪ್ರೀಂಕೋರ್ಟ್‌ 

ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರ ಬದುಕು ಶೋಚನೀಯ ಸ್ಥಿತಿಗೆ ತಲುಪಿದೆ. ಬಡ ಹಾಗೂ ಮಧ್ಯಮವರ್ಗದ ಜನರು ಕೂಡ ತುಂಬಾ ಕಷ್ಟ ಪಡುತ್ತಿದ್ದಾರೆ. ಇದಕ್ಕೆಲ್ಲಾ ರಾಜ್ಯ ಸರ್ಕಾರ ನೇರ ಕಾರಣ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!