by vijayendra
ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಅರ್ಧ ಸತ್ಯ ಹೇಳಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ. ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಯೋಜನೆಗಳಿಗೂ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಕಾಲ್ತುಳಿತ ದುರಂತವನ್ನು ಡೈವರ್ಟ್ ಮಾಡಲು ಜಾತಿಗಣತಿ ಮರು ಸರ್ವೆ ಎಂದು ಹೇಳುತ್ತಿದ್ದಾರೆ. ಈಗಾಗಲೇ ಕೇಂದ್ರ ಸರ್ಕಾರ ಜಾತಿಗಣತಿ ಆರಂಭ ಮಾಡಿದೆ ಎಂದರು.
ಇದನ್ನೂ ಓದಿ:- ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ವರುಣನ ಆರ್ಭಟ: 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರನ್ನು ನೋಡಿದರೆ ಪಾಪ ಅನ್ನಿಸುತ್ತಿದೆ. ಗ್ಯಾರಂಟಿಗಳಿಗೆ ಹಣ ಹೊಂದಿಸಲು ಆಗುತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿಗೂ ಹಣವಿಲ್ಲ ಎಂದು ವ್ಯಂಗ್ಯವಾಡಿದರು.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…
ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…
ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…