ರಾಜ್ಯ

ಜಾತಿಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ನ್ಯಾಯ ಸಿಗಬೇಕು. ಈ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಆದರೆ ಸಿಎಂಗೆ ತಮ್ಮ ಕುರ್ಚಿ ಬಗ್ಗೆ ಯಾವಾಗ ಅಭದ್ರತೆ ಕಾಡುತ್ತದೋ ಆಗ ಈ ಜಾತಿ ಗಣತಿ ವಿಚಾರ ಕೈಗೆತ್ತಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಜಾತಿ ಜನಗಣತಿ ಇಟ್ಟುಕೊಂಡು ಜಾತಿ ಜಾತಿಗಳ ನಡುವೆ ವಿಷಬೀಜ ಬಿತ್ತಲು ಹೊರಟಿರುವವರು ಸಿಎಂ ಸಿದ್ದರಾಮಯ್ಯ. ಅವರು ಸ್ಪಷ್ಟ ನಿಲುವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೇಳುವುದು ಒಂದು.. ಮಾಡುವುದು ಇನ್ನೊಂದು…

ರಾಜ್ಯ ಸರ್ಕಾರದ ವತಿಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಹೆಸರಿನಲ್ಲಿ ಮೈಸೂರು ನಗರದ…

4 mins ago

ಓದುಗರ ಪತ್ರ: ನ್ಯಾಯಾಂಗದ ಸದೃಢತೆಯ ಪುಷ್ಟೀಕರಣ

ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಜಿಲ್ಲೆಯ ಪಂಚಾಯಿತಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ…

6 mins ago

ಓದುಗರ ಪತ್ರ: ಸುರಕ್ಷತೆ ಮತ್ತು ಉದ್ಯೋಗದ ನಡುವೆ ಸಮತೋಲನ ಕಾಯ್ದುಕೊಳ್ಳಲಿ

ಸುಪ್ರೀಂ ಕೋರ್ಟ್ ತೀರ್ಪಿನ ನಂತರ ರಾಜ್ಯ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಹಳದಿ ಬೋರ್ಡ್ ಮತ್ತು ಜಿಪಿಎಸ್ ಕಡ್ಡಾಯಗೊಳಿಸಲು ಮುಂದಾಗಿರುವುದು ಮೇಲ್ನೋಟಕ್ಕೆ…

9 mins ago

ಪ್ರಗತಿಯ ಮೆಟ್ಟಿಲೇರುತ್ತಿರುವ ಮಂಡ್ಯ ಕರ್ನಾಟಕ ಸಂಘ

ಹೊಳಲು ಶ್ರೀಧರ್,  ಪತ್ರಕರ್ತಕರು ಹಾಗೂ ನಿವೃತ್ತ ಅಧ್ಯಾಪಕರು, ಮಂಡ್ಯ ದತ್ತಿನಿಧಿಗಳ ಮೂಲಕ ೩೯ ಮಂದಿ ಸಾಧಕರಿಗೆ ಇಂದು ಪ್ರಶಸ್ತಿ ಪ್ರದಾನ …

11 mins ago

ಗೋವಾದ ಉತ್ಸವವೂ ಗಂಧದ ಗುಡಿಯ ಮಿನಿ ಸಿನಿ ಹಬ್ಬಗಳೂ

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಸಾವಿರಕ್ಕೂ ಹೆಚ್ಚು ಚಿತ್ರಕಥೆಗಳಲ್ಲಿ ಅಂತಿಮ ಹಂತಕ್ಕೆ ೩೦ ಮಂದಿ ಆಯ್ಕೆ  ನವೆಂಬರ್…

17 mins ago