ರಾಜ್ಯ

ಪಕ್ಷ ವಿರೋಧಿ ಕೆಲಸ ಮಾಡಿದ್ದೇ ಉಚ್ಛಾಟನೆಗೆ ಕಾರಣ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಶಾಸಕರಾದ ಎಸ್.ಟಿ.ಸೋಮಶೇಖರ್‌ ಹಾಗೂ ಶಿವರಾಮ್‌ ಹೆಬ್ಬಾರ್‌ ಅವರನ್ನು ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದ ಆರೋಪದಡಿ ಶಾಸಕರಾದ ಶಿವರಾಮ್‌ ಹೆಬ್ಬಾರ್‌ ಹಾಗೂ ಎಸ್.ಟಿ.ಸೋಮಶೇಖರ್‌ ಅವರನ್ನು ಆರು ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ.

ಇದನ್ನೂ ಓದಿ:- ಮುತ್ತು ರತ್ನಗಳನ್ನೆಲ್ಲಾ ನೀವೇ ಇಟ್ಟುಕೊಳ್ಳಿ: ಬಿಜೆಪಿ ಶಾಸಕರ ಉಚ್ಛಾಟನೆಗೆ ಡಿಕೆಶಿ ಟಾಂಗ್‌

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪಕ್ಷ ವಿರೋಧಿ ಕೆಲಸ ಮಾಡಿದ್ದ ಪರಿಣಾಮ ಅವರಿಬ್ಬರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದಾಗ ಅವರಿಬ್ಬರೂ ಚೆನ್ನಾಗಿ ಅಧಿಕಾರಿ ಅನುಭವಿಸಿದ್ರು. ಈಗ ವಿಪಕ್ಷದಲ್ಲಿ ಕೂರಲು ಕಷ್ಟ ಆಯ್ತು ಅನ್ಸುತ್ತೆ. ಹಾಗಾಗಿ ಪಕ್ಷದ ವಿರುದ್ಧ ದಿನೇ ದಿನೇ ಇಲ್ಲಸಲ್ಲದ ಆರೋಪ ಮಾಡುತ್ತಾ, ಕಾಂಗ್ರೆಸ್‌ ನಾಯಕರ ಜೊತೆ ಗುರುತಿಸಿಕೊಂಡಿದ್ದರು. ಹೀಗಾಗಿ ಹೈಕಮಾಂಡ್‌ ಸರಿಯಾದ ತೀರ್ಮಾನ ಕೈಗೊಂಡಿದೆ ಎಂದರು.

ಇನ್ನು ಬಿಜೆಪಿ ಶಾಸಕರ ಉಚ್ಛಾಟನೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಮ್ಮ ಪಕ್ಷದ ತೀರ್ಮಾನಕ್ಕೆ ಡಿಕೆಶಿ ಅವರು ನೋವು ಪಡುವ ಅಗತ್ಯವಿಲ್ಲ. ಅವರಿಬ್ಬರು ಪಕ್ಷ ವಿರೋಧಿ ಕೆಲಸ ಮಾಡಿದ್ದ ಬಗ್ಗೆ ಡಿಕೆಶಿಗೂ ಗೊತ್ತು ಎಂದರು.

ಆಂದೋಲನ ಡೆಸ್ಕ್

Recent Posts

ಸವಾರರಿಗೆ ತಟ್ಟಿದ ಯುದ್ಧದ ಬಿಸಿ: ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

14 mins ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

23 mins ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

29 mins ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

1 hour ago

ಸರ್ಕಾರ ರಾಜ್ಯದ ಜನರ ಭರವಸೆ ನುಚ್ಚು ನೂರು ಮಾಡಿದೆ: ವಿಜಯೇಂದ್ರ ಆಕ್ರೋಶ

ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ಗೆ ಆಡಳಿತ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ಮಾಡಿದ್ದಾರೆ.…

1 hour ago

ಧುರಂಧರ್‌-2 ಚಿತ್ರ ವೀಕ್ಷಿಸಿ ನಟಿ ರಮ್ಯಾ ಗರಂ: ಫ್ಯಾನ್ಸ್‌ಗೆ ಏನಂದು ಗೊತ್ತಾ?

ಬಹುನಿರೀಕ್ಷಿತ ಧುರಂಧರ್‌-2 ಸಿನಿಮಾ ಬಗ್ಗೆ ನಟಿ ರಮ್ಯಾ ಬರೆದಿರುವ ಟೂ ಪೇಜ್‌ ವಿಮರ್ಶೆ ಈಗ ಸೋಚಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಬ್ಬಿಸಿದೆ.…

2 hours ago