ಉತ್ತರ ಕನ್ನಡ: ಸಿಎಂ ಸಿದ್ದರಾಮಯ್ಯ ಅವರ ಪಾಲಿಗೆ ಜಾತಿ ಗಣತಿ ವರದಿಯೂ ಬೆದರು ಬೊಂಬೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯ ಮಾಡಿದ್ದಾರೆ.
ಉತ್ತರ ಕನ್ನಡದಲ್ಲಿ ಇಂದು(ಏಪ್ರಿಲ್.11) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ವರದಿ ಮಂಡನೆ ಮಾಡಲಾಗಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಅವರಿಗೆ ತಮ್ಮ ಸಿಎಂ ಕುರ್ಚಿ ಅಲುಗಾಡಿದಾಗ ಸರ್ಕಾರದ ದುರಾಡಳಿತ ಬೆಲೆ ಏರಿಕೆ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತದೆ. ಅದನ್ನು ಮುಚ್ಚಿಕೊಳ್ಳಲು ಜಾತಿ ಗಣತಿ ವರದಿ ಮಂಡನೆಗೆ ಮುಂದಾಗುತ್ತಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಪ್ರತಿನಿತ್ಯ ಅಗತ್ಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡುತ್ತಿದ್ದಾರೆ. ಸರ್ಕಾರದ ಈ ತೀರ್ಮಾನದಿಂದ ಜನತೆ ಸಂಕಷ್ಟಕ್ಕೀಡಾಗಿದ್ದು, ರಾಜ್ಯದ ಜನತೆ ಬೇಸತ್ತಿದ್ದಾರೆ. ಅಲ್ಲದೇ ಜನಾಕ್ರೋಶ ಯಾತ್ರೆಯ ಬಿಸಿ ಕಾಂಗ್ರೆಸ್‌ಗೂ ತಟ್ಟಿದೆ. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಏಪ್ರಿಲ್. 17 ರಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಕರೆ ನೀಡಿದ್ದಾರೆ. ಇದು ಅವರ ಹತಾಶ ಮನೋಭಾವ ತೋರಿಸಿದೆ ಎಂದು ವಾಗ್ದಾಳಿ ನಡೆಸಿದರು.





