ಹುಬ್ಬಳ್ಳಿ: ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಉಪಚುನಾವಣೆಯಲ್ಲಿ ಶಿಗ್ಗಾಂವಿಯಲ್ಲಿ ಮಗನ ಸೋಲಿನ ಕುರಿತು ಮಾತನಾಡಿದ ಅವರು, ಕ್ಷೇತ್ರದ ಜನರ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ನಮಗೆ ಗೆಲ್ಲುವ ಎಲ್ಲಾ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್‌ನವರು ಗೆಲುವು ಸಾಧಿಸಿದ್ದಾರೆ ಎಂದು ಆರೋಪಿಸಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಗೆದ್ದ ಯಾಸಿರ್ ಖಾನ್ ಪಠಾಣ್‌ಗೆ ಅಭಿನಂದನೆಗಳು. ಚುನಾವಣೆ ಸಂಧರ್ಭದಲ್ಲಿ ಅಲಲಿಯ ಜನರ ಸ್ಪಂದನೆ ನೋಡಿದರೆ ನಮಗೆ ಗೆಲ್ಲುವ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್‌ನವರು ಗೆಲುವು ಸಾಧಿಸಿದ್ದಾರೆ. ಸರ್ಕಾರದ ಅವರದ್ದೇ ಇದೆ. ಆಡಳಿತ ಪಕ್ಷ ಎಂದು ಕಾಂಗ್ರೆಸ್ ಶಾಸಕರರನ್ನು ಆಯ್ಕೆ ಮಾಡಿದ್ದಾರೆ ಎಂದು ಫಲಿತಾಂಶದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಶಿಗ್ಗಾಂವಿ, ಸವಣೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನಾವು ಅಭಿವೃದ್ಧಿ ಜೊತೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿಯಾಗಲಿ ಎಂದು ಆಶಿಸುತ್ತೇನೆ ಎಂದರು.





