ರಾಜ್ಯ

ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟ

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.

ಹಿಮಾಚಲ ಪ್ರದೇಶದ ಮೂರು ಕ್ಷೇತ್ರಗಳ ಪೈಕಿ ಎರಡರಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸಿದ್ದು, ಒಂದು ಕ್ಷೇತ್ರ ಬಿಜೆಪಿ ಪಾಲಾಗಿದೆ. ಮಧ್ಯಪ್ರದೇಶದ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿ ಅಣ್ಯರ್ಥಿ ಜಯಗಳಿಸಿದ್ದಾರೆ.

ಪಂಜಾಬ್‌ ಮತ್ತು ತಮಿಳುನಾಡಿನ ತಲಾ ಒಂದು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಉತ್ತರಾಖಂಡದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಪೈಕಿ ಬದ್ರಿನಾಥ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆದ್ದಿರುವುದು ವಿಶೇಷವಾಗಿದೆ.

ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಎಲ್ಲಾ ಕ್ಷೇತ್ರಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್‌ ಪಕ್ಷ ಗೆದ್ದುಕೊಂಡಿದೆ.

ಬಿಹಾರದ ಒಂದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…

25 mins ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…

49 mins ago

ಏಪ್ರಿಲ್.‌9ರಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…

1 hour ago

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

2 hours ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

3 hours ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

3 hours ago