ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ವಿವಿಧ ಪಕ್ಷಗಳ 10 ಅಭ್ಯರ್ಥಿಗಳು ಗೆಲುವು ದಾಖಲಿಸಿದ್ದಾರೆ.
ಹಿಮಾಚಲ ಪ್ರದೇಶದ ಮೂರು ಕ್ಷೇತ್ರಗಳ ಪೈಕಿ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದು, ಒಂದು ಕ್ಷೇತ್ರ ಬಿಜೆಪಿ ಪಾಲಾಗಿದೆ. ಮಧ್ಯಪ್ರದೇಶದ ಒಂದು ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿ ಅಣ್ಯರ್ಥಿ ಜಯಗಳಿಸಿದ್ದಾರೆ.
ಪಂಜಾಬ್ ಮತ್ತು ತಮಿಳುನಾಡಿನ ತಲಾ ಒಂದು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಮತ್ತು ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.
ಉತ್ತರಾಖಂಡದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಈ ಪೈಕಿ ಬದ್ರಿನಾಥ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ವಿಶೇಷವಾಗಿದೆ.
ಪಶ್ಚಿಮ ಬಂಗಾಳದ ನಾಲ್ಕು ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಎಲ್ಲಾ ಕ್ಷೇತ್ರಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ಪಕ್ಷ ಗೆದ್ದುಕೊಂಡಿದೆ.
ಬಿಹಾರದ ಒಂದು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ದಾಖಲಿಸಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…