ಬೆಂಗಳೂರು: ವಿಪಕ್ಷಗಳು ಮಾಡುತ್ತಿರುವ ಆರೋಪಗಳು ಸುಳ್ಳು ಎಂದು ಜನತಾ ನ್ಯಾಯಾಲಯದಿಂದ ತೀರ್ಪು ಹೊರಬಿದ್ದಿದೆ ಎಂದು ಸಚಿವ ಭೈರತಿ ಸುರೇಶ್ ಉಪಚುನಾವಣೆ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ.
ಉಪಚುನಾವಣೆ ಗೆಲುವಿನ ಬಗ್ಗೆ ಮಾಧ್ಯಮದವರೊಂದಿಗೆ ಸಂತಸ ವ್ಯಕ್ತಪಡಿಸಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು, ವಿಪಕ್ಷಗಳು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಮೇಲೆ ಪದೇ ಪದೇ ಆಪಾದನೆ ಮಾಡುತ್ತಿದ್ದರು. ಈಗ ಜನತಾ ನ್ಯಾಯಾಲಯ ಒಳ್ಳೆಯ ತೀರ್ಪನ್ನೇ ನೀಡಿದೆ ಎಂದು ವಿಪಕ್ಷಗಳಿಗೆ ತಿರುಗೇಟು ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನ್ಯಾಯಯುತವಾಗಿ ಸೈಟ್ ತೆಗೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿಯವರ ಆರೋಪಗಳೆಲ್ಲಾ ಸುಳ್ಳು ಎಂದು ಜನರೆಲ್ಲಾ ಚುನಾವಣೆಯಲ್ಲಿ ತೀರ್ಪು ನೀಡಿದ್ದಾರೆ ಎಂದರು.
ಈ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಆಶೀರ್ವಾದ ಮಾಡಿದವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ವಿಪಕ್ಷಗಳ ವಿರುದ್ಧ ಹರಿಹಾಯ್ದರು.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…