ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬಿದ್ದಿದೆ.
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಳೆದ ಎರಡು ವಾರಗಳಿಂದ ನಡೆದ ಘಟಾನುಘಟಿ ನಾಯಕರ ವಾಕ್ಸಮರ, ರೋಡ್ ಶೋ ಮತ್ತು ಪಾದಯಾತ್ರೆಗಳಿಗೆ ಇಂದು ಅಂತಿಮ ತೆರೆ ಬಿದ್ದಿದ್ದು, ನಾಳೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಿದ್ದಾರೆ.
ಬಾಗಲಕೊಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಮೇಶ್ ಮೇಟಿ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ, ಹಾಗೂ ವೀರಣ್ಣ ಚರಂತಿಮಠ ಪರವಾಗಿ, ದಾವಣಗೆರೆ ದಕ್ಷಿಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್ ಸಮರ್ಥ್ ಹಾಗೂ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರ ಪರ ಮಾಜಿ ಸಿ.ಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಅನೇಕರು ರೋಡ್ ಶೋ ಮೂಲಕ ಪ್ರಚಾರ ನಡೆಸಿದರು. ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿರುವ ಕಾರಣ ನಾಳೆ ಮಾತ್ರ ಅಭ್ಯರ್ಥಿ ಸೇರಿದಂತೆ 5 ಮಂದಿ ಮಾತ್ರ ಮನೆ ಮನೆಗೆ ತೆರಳಿ ಮಾತಯಾಚಿಸಲಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…