Categories: ರಾಜ್ಯ

Bypoll Results: ಚನ್ನಪಟ್ಟಣ, ಸಂಡೂರು, ಶಿಗ್ಗಾವಿಯಲ್ಲಿ ಮತ ಎಣಿಕೆಗೆ ಕ್ಷಣಗಣನೆ

ಮೈಸೂರು: ಆಡಳಿತರೂಢ ಕಾಂಗ್ರೆಸ್‌ ಮತ್ತು ಮೈತ್ರಿ ಪಕ್ಷಗಳಾದ ಬಿಜೆಪಿ-ಜೆಡಿಎಸ್‌ಗೆ ಪ್ರತಿಷ್ಠೆಯಾಗಿದ್ದ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ.

ಮೂರು ಕ್ಷೇತ್ರಳಿಗೂ ನವೆಂಬರ್‌ 13 ರಂದು ಮತದಾನ ನಡೆದಿತ್ತು. ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಗೆ ಬಹುತೇಕ ಸ್ಪಷ್ಟವಾದ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ.

ಎಲ್ಲ ಕೇಂದ್ರಗಳಲ್ಲಿಯೂ ಮತ ಎಣಿಕೆಗೆ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇವಿಎಂ ಯಂತ್ರಗಳಲ್ಲಿ ಚಲಾವಣೆಯಾದ ಮತಗಳ ಎಣಿಕೆಗೂ ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ನಡೆಯಲಿದೆ.

ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಬಿಜೆಪಿ-ಜಾ. ದಳ ಮೈತ್ರಿಕೂಟ ಗೆಲ್ಲುವ ಸಾಧ್ಯತೆಯಿದೆ. ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಇದೆ. ಹೀಗಾಗಿ ಫಲಿತಾಂಶದ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಮೂರು ಕ್ಷೇತ್ರದ ಫಲಿತಾಂಶ ಮಧ್ಯಾಹ್ನದ ವೇಳೆಗೆ ಸಿಗುವ ನಿರೀಕ್ಷೆ ಇದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

15 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

16 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

17 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

17 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

17 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

20 hours ago