ರಾಯಚೂರು: ಸಿಎಂ ಸಿದ್ದರಾಮಯ್ಯ ಅವರು, ಸಂವಿಧಾನವನ್ನು ತಮ್ಮ ಜೀವನದ ಧ್ಯೇಯವಾಗಿಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದಾರೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಇಂದು(ಜನವರಿ.12) ದೇವದುರ್ಗ ತಿಂಥಣಿ ಬ್ರಿಡ್ಜ್ ವತಿಯಿಂದ ಆಯೋಜಿಸಲಾಗಿದ್ದ ಕನಕಗುರು ಪೀಠದ ಹಾಲುಮತ ಸಂಸ್ಕೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಯಾರೂ ಏನೂ ಮಾಡಲು ಆಗುವುದಿಲ್ಲ. ರಾಜ್ಯದಲ್ಲಿ ಶೇ.60 ರಿಂದ 90ರಷ್ಟು ಜನ ಸಿದ್ದರಾಮಯ್ಯ ಅವರೊಂದಿಗೆ ಇದ್ದಾರೆ. ಅಲ್ಲದೇ ಕುರುಬ ಸಮುದಾಯ, ದಲಿತ ವರ್ಗ, ಮೇಲ್ವರ್ಗ ಹಾಗೂ ಬಡವರೆಲ್ಲರೂ ಸಿದ್ದರಾಮಯ್ಯ ಅವರಿಗೆ ಮತಗಳನ್ನು ಬೆಂಬಲಿಸಿದ್ದೀರಿ. ಹೀಗಾಗಿ ಅವರೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸುತ್ತಿದ್ದು, ಯಾರು ಸಹ ಆಂತಕ ಪಡುವ ಅಗತ್ಯವಿಲ್ಲ ಎಂದು ಹೇಳಿದರು.
ನಮ್ಮ ಹೈಕಮಾಂಡ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಹಾಗೂ ಸುರ್ಜೇವಾಲಾ ಎಲ್ಲರೂ ಸಹ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ಇದ್ದಾರೆ. ಅಲ್ಲದೇ ರಾಜ್ಯದ ಜನತೆಯೇ ಆರ್ಶೀವಾದ ಅವರ ಮೇಲಿದೆ. ಹೀಗಾಗಿ ಬಿಜೆಪಿ-ಜೆಡಿಎಸ್ ಪಕ್ಷಗಳು ಮಾಡುವ ಇಲ್ಲಸಲ್ಲದ ಆರೋಪಗಳಿಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ಕನಕದಾಸ ಅವರು ಬರೆದಿರುವ ಕುಲಕುಲವೆಂದು ಹೊಡೆದಾಡದಿರಿ ಕುಲದ ಮೂಲವನ್ನೇನಾದರೂ ಬಲ್ಲೀರಾ ಎಂಬ ವಚನವನ್ನು ನೆನಪಿಸಿದರು.
ನನಗೆ ಶಾಸಕರು, ಸಚಿವರ ಬೆಂಬಲ ಹೇಳಿಕೆ ವಿಚಾರ
ಇದೇ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವೈಯಕ್ತಿಕ ಹೇಳಿಕೆಯನ್ನು ತಿಳಿಸಿದ್ದಾರೆ. ಅದರಲ್ಲಿ ಯಾವ ತಪ್ಪು ಇಲ್ಲ, ಎಲ್ಲರಿಗೂ ವೈಯಕ್ತಿಕ ನಿರ್ಧಾರವನ್ನು ತಿಳಿಸುವ ಸ್ವಾತಂತ್ರ್ಯವಿದೆ ಎಂದು ತಿಳಿಸಿದರು.
ಪ್ರಸ್ತುತ ಸಿಎಂ ಅಗಿ ಸಿದ್ದರಾಮಯ್ಯ ಅವರೇ ಇದ್ದಾರೆ, ಮುಂದೆಯೂ ಅವರೇ ಮುಖ್ಯಮಂತ್ರಿಯಾಗಿ ಆಡಳಿತ ನಿರ್ವಹಿಸುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಹೈಕಮಾಂಡ್ ತೀರ್ಮಾನಿಸಲಿದ್ದು, ಯಾವುದೇ ಬದಲಾವಣೆಗೆ ಅವಕಾಶವಿಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹಾಗಾಗಿ ಮುಂದಿನ ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲೇ ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.
ಇನ್ನೂ ಡಿನ್ನರ್ ಪಾರ್ಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಡಿನ್ನರ್ ಪಾರ್ಟಿಯನ್ನು ಯಾರೂ ತಡೆ ಹಿಡಿದಿಲ್ಲ. ಕೇವಲ ಅದನ್ನು ಮುಂದೂಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಈ ಕಾರಣಕ್ಕೆ ಮುಂದಿನ ದಿನಗಳಲ್ಲಿ ಹೈಕಮಾಂಡ್‌ನೊಂದಿಗೆ ಡಿನ್ನರ್ ಪಾರ್ಟಿ ಕುರಿತು ಚರ್ಚಿಸಿ ಆಯೋಜನೆ ಮಾಡಲಾಗುವುದು ಎಂದರು.