ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿಎಲ್ ಸಂತೋಷ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾದ ನಂತರ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹುದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿಎಲ್ ಸಂತೋಷ್ ಅವರುಗಳಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.
ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ ಜನರ ಆಶೀರ್ವಾದವೇ ನನಗೆ ಶ್ರೀರಕ್ಷೆ ಎಂದು ವಿಜಯೇಂದ್ರ ಹೇಳಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…