ರಾಜ್ಯ

ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣ : ಡೈರಿಯಲ್ಲಿ ಪ್ರಭಾವಿ ಶಾಸಕರು, ಚಿತ್ರರಂಗದವರ ಹೆಸರು

ಬೆಂಗಳೂರು : ಖ್ಯಾತ ಉದ್ಯಮಿ ಮತ್ತು ಕಾನ್ಛಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಕ್ಷಣ ಕ್ಷಣಕ್ಕೂ ಹೊಸ ತಿರುವು ಪಡೆಯುತ್ತಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಡಿಕೊಂಡ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ.

ಕಾನ್ಛಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿ.ಜೆ.ರಾಯ್ ಅವರ ಆತ್ಮಹತ್ಯೆ ಪ್ರಕರಣ ಉದ್ಯಮ ವಲಯದಲ್ಲಿ ಭಾರೀ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದ ತನಿಖೆಯಲ್ಲಿ ಈಗ ರಾಯ್ ಅವರ ವೈಯಕ್ತಿಕ ಡೈರಿ ಪೊಲೀಸರಿಗೆ ಪ್ರಮುಖ ಸುಳಿವಾಗಿ ಪರಿಣಮಿಸಿದೆ. ಇದರಲ್ಲಿ ಪ್ರಮುಖ ವಿಚಾರಗಳನ್ನು ಬರೆದಿಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಖ್ಯಾತ ಉದ್ಯಮಿ ಸಿ.ಜೆ.ರಾಯ್ ಅವರಿಗೆ ಪ್ರತಿದಿನ ಡೈರಿ ಬರೆಯುವ ಅಭ್ಯಾಸವಿತ್ತು ಎನ್ನಲಾಗಿದ್ದು, ಆ ದಿನಚರಿಯಲ್ಲಿ ಹಲವು ರಾಜಕೀಯ ಹಾಗೂ ಸಿನಿಮಾ ರಂಗದ ಗಣ್ಯರ ಕುರಿತು ಉಲ್ಲೇಖಗಳಿರುವುದಾಗಿ ಮೂಲಗಳು ತಿಳಿಸಿವೆ. ಡೈರಿಯಲ್ಲಿ ರಾಜ್ಯದ ಇಬ್ಬರು ಪ್ರಭಾವಿ ಶಾಸಕರು ಮತ್ತು ಒಬ್ಬ ಮಾಜಿ ಸಂಸದರ ಹೆಸರುಗಳು ಕಾಣಿಸಿಕೊಂಡಿರುವುದು ಪೊಲೀಸರ ಗಮನ ಸೆಳೆದಿದೆ ಎಂದು ಹೇಳಲಾಗುತ್ತಿದೆ.

ತಮ್ಮ ಕಂಪೆನಿಯ ಕಾರ್ಯಕ್ರಮಗಳಿಗೆ ಅವರನ್ನು ಕರೆಸುತ್ತಿದ್ದರು ಎಂದು ಮಾಹಿತಿ ಇದೆ. ಕೇರಳದಲ್ಲಿ ೧೬ ಪ್ರಾಜೆಕ್ಟ್‌ಗಳು ನಡೆಯುತ್ತಿದ್ದವು. ಈ ಪ್ರಾಜೆಕ್ಟ್‌ಗಳಿಗೆ ಸಂಬಂಧಿಸಿ ಹಲವು ಈವೆಂಟ್‌ಗಳನ್ನು ಆಯೋಜಿಸಿದ್ದರು. ಈ ಈವೆಂಟ್‌ಗಳಿಗೆ ನಟಿಯರು, ಮಾಡೆಲ್‌ಗಳು ಮತ್ತು ರಾಜಕಾರಣಿಗಳನ್ನು ಆಹ್ವಾನಿಸುತ್ತಿದ್ದರು. ಆದರೆ ಡೈರಿಯಲ್ಲಿ ಹೆಸರುಗಳನ್ನು ಏಕೆ ಬರೆದಿದ್ದರು? ಬರೀ ಈವೆಂಟ್ ವಿಚಾರಕ್ಕೆಯಾ ಅಥವಾ ಬೇರೆ ಕಾರಣವೇ? ಎಂಬುದರ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಯಾರ ಹೆಸರುಗಳು ಉಲ್ಲೇಖ?
ವಿಶೇಷವಾಗಿ ಬೆಂಗಳೂರಿನ ಒಬ್ಬ ಪ್ರಭಾವಿ ಶಾಸಕ ಮತ್ತು ಕೋಲಾರ ಜಿಲ್ಲೆಯ ಶಾಸಕರೊಂದಿಗೆ ನಡೆದಿದ್ದ ವ್ಯಾವಹಾರಿಕ ಸಂಪರ್ಕಗಳ ಕುರಿತು ವಿವರಗಳು ದಾಖಲಾಗಿವೆ ಎನ್ನಲಾಗಿದೆ. ಜೊತೆಗೆ, ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಮಾಡೆಲ್‌ಗಳ ಹೆಸರುಗಳೂ ಡೈರಿಯಲ್ಲಿ ಉಲ್ಲೇಖವಾಗಿರುವ ಮಾಹಿತಿ ಲಭ್ಯವಾಗಿದೆ.

ಇದಲ್ಲದೆ, ರಾಯ್ ಅವರು ದುಬೈನಲ್ಲಿ ನಡೆಸುತ್ತಿದ್ದ ವ್ಯವಹಾರಗಳು, ಅಲ್ಲಿನ ಪ್ರಭಾವಿ ವ್ಯಕ್ತಿಗಳೊಂದಿಗೆ ಹೊಂದಿದ್ದ ಸಂಪರ್ಕಗಳ ಕುರಿತು ಕೂಡ ಡೈರಿಯಲ್ಲಿ ಬರೆಯಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಎಲ್ಲಾ ಅಂಶಗಳನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದು, ಡೈರಿಯಲ್ಲಿರುವ ಮಾಹಿತಿಯ ಆಧಾರದಲ್ಲಿ ತನಿಖೆ ಮುಂದುವರಿದಿದೆ ಎನ್ನಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

2 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

4 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

6 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

6 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

7 hours ago