ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲಿದೆ.
ಸಿ.ಜೆ.ರಾಯ್ ಆತ್ಮಹತ್ಯೆಯ ಹಿಂದಿನ ಸತ್ಯ ಎಸ್‌ಐಟಿ ವರದಿಯಿಂದ ಬಯಲಾಗುವ ಸಾಧ್ಯತೆಯಿದೆ. ಎಸ್‌ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿತ್ತು. ಐಟಿ ದಾಳಿ, ಉದ್ಯಮ ವ್ಯವಹಾರಗಳು, ವ್ಯವಹಾರದಲ್ಲಿನ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಈ ಸಂಬಂಧ ಹಲವು ದಾಖಲೆಗಳು ಮತ್ತು ಕಡತಗಳನ್ನು ಎಸ್‌ಐಟಿ ಪರಿಶೀಲನೆ ನಡೆಸಿದೆ.
ಅಂತಿಮ ಹಂತದ ತನಿಖೆ ನಡೆಸಿರುವ ಎಸ್‌ಐಟಿ ತಂಡ ಕೆಲವೇ ದಿನಗಳಲ್ಲಿ ತನ್ನ ಸಮಗ್ರ ವರದಿಯನ್ನು ಸಲ್ಲಿಸಲಿದೆ. ಈ ವರದಿಯ ಮೂಲಕವೇ ರಾಯ್ ಆತ್ಮಹತ್ಯೆಯ ಹಿಂದಿನ ನಿಗೂಢ ಸತ್ಯಾಂಶಗಳು ಹೊರಬೀಳುವ ಸಾಧ್ಯತೆಯಿದೆ.





