ಬೆಳಗಾವಿ: ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸುವರ್ಣಸೌಧದಲ್ಲಿ ಇಂದಿನಿಂದ(ಡಿ.9) ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ಈ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅನೇಕ ಆರೋಪಗಳನ್ನು ಕುರಿತು ಚರ್ಚಿಸುವ ಸಾಧ್ಯತೆ ಇದೆ. ಹೀಗಾಗಿ ವಿಪಕ್ಷಗಳಿಗೆ ಸೂಕ್ತ ಉತ್ತರ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಶಾಸಕರಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಹಿನ್ನೆಲೆಯಲ್ಲಿಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಯ ಖಾಸಗಿ ಹೊಟೇಲ್‌ನಲ್ಲಿ ಕೈ ಪಕ್ಷದ ಶಾಸಕಾಂಗ ಸಭೆಯನ್ನು ನಡೆಸಲು ನಾಳೆ(ಡಿ.10) ತೀರ್ಮಾನಿಸಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು ಹಾಗೂ ಪರಿಷತ್ ಸದಸ್ಯರು ಭಾಗವಹಿಸಿ ವಿರೋಧ ಪಕ್ಷಗಳಿಗೆ ಸೂಕ್ತ ಉತ್ತರ ನೀಡಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…