Mysore
29
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ : ಸಿಎಂ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.
ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.

Tags:
error: Content is protected !!