ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಹೇಳಿದ್ದಾರೆ.
ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.
ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ಪ್ರೀತಿ – ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ ಎಂದಿದ್ದಾರೆ.
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಅಂಗವಾಗಿ…
ಇಸ್ಲಾಮಾಬಾದ್: ಇರಾನ್, ಅಮೇರಿಕಾ-ಇಸ್ರೇಲ್ ಯುದ್ಧದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ತೈಲ ಬಿಕ್ಕಟ್ಟು ಉಲ್ಬಣಗೊಂಡಿದೆ. ಇದರಿಂದ ಪಾಕಿಸ್ತಾನದಲ್ಲಿ ಗಣರಾಜ್ಯೋತ್ಸವ ಮೆರವಣಿಗೆ ರದ್ದಾಗಿದೆ. ಮಾರ್ಚ್.23ರಂದು…
ಮಡಿಕೇರಿ: ನಾಡಿನಾದ್ಯಂತ ಇಂದು ಹೊಸ ವರ್ಷ ಯುಗಾದಿ ಸಂಭ್ರಮ ಮನೆ ಮಾಡಿದ್ದು, ಕೊಡಗಿನ ಮನೆ ಮನೆಯಲ್ಲೂ ಯುಗಾದಿ ಹಬ್ಬದ ಸಡಗರ…
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…