ಬೆಂಗಳೂರು: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಹ ಒಬ್ಬರಾಗಿದ್ದು, ನಮ್ಮ ದೇಶಕ್ಕೆ ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇಂದು(ಡಿ.6) ಆಯೋಜಿಸಲಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು 1956 ಡಿಸೆಂಬರ್ 6 ರಂದು ನಮ್ಮನ್ನೆಲ್ಲಾ ಅಗಲಿದರು. ಆ ದಿನವನ್ನೇ ಪರಿನಿರ್ವಾಣ ದಿನಾಚರಣೆ ಎಂದು ಆಚರಿಸಲಾಗುತ್ತದೆ ಎಂದಿದ್ದಾರೆ.
ಅಂಬೇಡ್ಕರ್ ಈ ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ನೀಡಿದ್ದು, ಈಗ ಅದು ಜಗತ್ತಿನಲ್ಲಿಯೇ ಶ್ರೇಷ್ಠ ಲಿಖಿತ ಸಂವಿಧಾನವೆಂಬ ಖ್ಯಾತಿ ಪಡೆದಿದೆ . ಅನೇಕ ಜನರು ಸಂವಿಧಾನವನ್ನು ವಿರೋಧಿಸುತ್ತಾರೆ. ಆದರೆ ನಮ್ಮ ಭಾರತ ದೇಶ ಬಹುಸಂಸ್ಕೃತಿಯ, ಬಹುತ್ವದ ದೇಶವಾಗಿದೆ. ಈ ದೇಶದಲ್ಲಿ ಹಲವು ಜಾತಿ, ಧರ್ಮಗಳು ಹಾಗೂ ಹಲವು ಭಾಷೆಗಳಿವೆ. ಹೀಗಾಗಿ ಅಂಬೇಡ್ಕರ್ ನಮ್ಮ ದೇಶಕ್ಕೆ ಪೂರಕವಾದ ಸಂವಿಧಾನವನ್ನು ನೀಡಿದರು. ಮೂಲಭೂತವಾಗಿ ನಾವೆಲ್ಲಾ ಮನುಷ್ಯರು ಎಂದು ಸಾರಿ ಮಾನವ ಧರ್ಮವನ್ನು ಪಾಲಿಸಿ, ಮಾನವರು ಪರಸ್ಪರ ಪ್ರೀತಿಸಬೇಕೇ ಹೊರತು ದ್ವೇಷ ಸಲ್ಲದು ಎಂದು ಹೇಳಿದ ಮಹಾನ್ ವ್ಯಕ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಅಂದಿನ ಕಾಲದಲ್ಲಿಯೇ ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದ ನಾನು ಹಿಂದೂ ಆಗಿ ಹುಟ್ಟಿದ್ದು, ಹಿಂದೂ ಆಗಿ ಸಾಯುವುದಿಲ್ಲ ಎಂದು ಹೇಳಿ ತಮ್ಮ ಅಂತಿಮ ದಿನಗಳಲ್ಲಿ ಬೌದ್ಧ ಧರ್ಮ ಸ್ವೀಕಾರಿಸಿ ಮರಣ ಹೊಂದಿದರು. ಆದರೆ ಅವರು ನೀಡಿದ ಸಂವಿಧಾನದ ಇಂದಿಗೂ ಜೀವಂತವಾಗಿದೆ. ಅದನ್ನು ನಾವೆಲ್ಲರೂ ರಕ್ಷಿಸಿ, ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅಂತೆಯೇ ಸಂವಿಧಾನ , ಪ್ರಜಾಪ್ರಭುತ್ವ, ಸಮಾನತೆ ತರುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ ಎಂದು ತಿಳಿಸಿದ್ದಾರೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…