ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್ ತಳ್ಳಿ ಒಳಗೆ ನುಗ್ಗಿರುವುದಕ್ಕೆ ನಮ್ಮ ಬಳಿ ಸಾಕ್ಷ್ಯಾಧಾರಗಳಿವೆ. ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಸುಮಾರು 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.
ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಹಕ್ಕು ಹಾಗೂ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ ಇರಬೇಕು. ಅದನ್ನು ಬಿಟ್ಟು ಕಾನೂನು ಅನ್ನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದರೆ ಸರ್ಕಾರ ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಸಂಧಾನಕ್ಕಾಗಿ ಸಚಿವರನ್ನು ನೇಮಿಸಲಾಗಿತ್ತು.
ಪಂಚಮಸಾಲಿ ಹೋರಾಟಗಾರರು ಟ್ರ್ಯಾಕ್ಟರ್ ತರುವ ಮೂಲಕ ಹೋರಾಟ ಮಾಡುತ್ತೇವೆಂದು ಮುಂಚೆಯೇ ತಿಳಿಸಿದ್ದರು. ಅದಕ್ಕೆ ಕೋರ್ಟ್ ಅನುಮತಿ ನೀಡದೆ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಆದೇಶ ನೀಡಿತ್ತು. ಆದರೆ ಹೋರಾಟಗಾರರು ಕಾನೂನು ಅನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಎಲ್ಲ ಕಡೆಗೂ ಹೋಗಲು ಸಾಧ್ಯವಿಲ್ಲವೆಂದು ಅರಿತು ಈ ಹೋರಾಟವನ್ನು ತಡೆಯಲು ಸಚಿವ ಎಚ್.ಸಿ.ಮಹದೇವಪ್ಪ ಸೇರಿದಂರೆ ಮೂವರು ಸಚಿವರನ್ನು ಸಂಧಾನಕ್ಕಾಗಿ ನೇಮಿಸಲಾಗಿತ್ತು. ಆದರೆ ಅವರು ನಾವು ಸಿಎಂ ಬಳಿಯೇ ಮಾತನಾಡುತ್ತೇವೆ ಎಂದಿದ್ದರು. ಈ ಬೇಡಿಕೆಯನ್ನು ನಾನು ಈಡೇರಿಸಲು ಕರೆದಾಗ ಹೋರಾಟಗಾರರು ಬರಲಿಲ್ಲ ಎಂದಿದ್ದಾರೆ.
ಅಂದಿನ ಕಾಲದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ.2 ಹಾಗೂ 3ಬಿ ಪ್ರವರ್ಗಗಳಲ್ಲಿರುವ ಲಿಂಗಾಯತರಿಗೆ ಶೇ.2 ರಷ್ಟು ಸಲಾತಿಯನ್ನು ಜಾರಿ ಮಾಡಿದ್ದರು. ಹಾಗಾಗಿ ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್ ಹಾಗೂ ಇದೇ ಸ್ವಾಮೀಜಿ ಅವರು ಸುಪ್ರಿಂಕೋರ್ಟ್ ಮೆಟ್ಟಿಲೇರಿದ್ದರು. ಆ ವೇಳೆ ಅಂದಿನ ಅಡ್ವಕೇಟ್ ಜನರಲ್ ಹಾಗೂ ಬಿಜೆಪಿ ಸರ್ಕಾರ ಮೀಸಲಾತಿಯಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿದ್ದರು ಎಂದು ಹೇಳಿದ್ದಾರೆ.
ಪಂಚಮಸಾಲಿಯವರಿಗೆ ಸಂವಿಧಾನದ ಪ್ರಕಾರವೇ ಮೀಸಲಾತಿ ನೀಡಲಾಗುವುದು
ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಡಿ ಅಡಿಯಲ್ಲಿದ್ದಾರೆ. ಅವರನ್ನು 2ಎ ಸೇರಿಸಬೇಕಾದರೆ ಸಂವಿಧಾನದ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ. ಹೀಗಾಗಿ ನಾವು ಅದರಂತೆಯೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…