ರಾಜ್ಯ

ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸಮ್ಮನಿರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ: ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದಕ್ಕೆ ಎಲ್ಲರಿಗೂ ಹಕ್ಕಿದೆ, ಆದರೆ ಕಾನೂನು ಅನ್ನು ಕೈಗೆ ತೆಗೆದುಕೊಂಡರೆ ಸರ್ಕಾರ ಕಣ್ಣಮುಚ್ಚಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಂದು(ಡಿ.13) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಪ್ರತಿಭಟನಾಕಾರರು ಕಲ್ಲು ಹೊಡೆದಿರುವುದಕ್ಕೆ, ಬ್ಯಾರಿಕೇಡ್‌ ತಳ್ಳಿ ಒಳಗೆ ನುಗ್ಗಿರುವುದಕ್ಕೆ ನಮ್ಮ ಬಳಿ ಸಾಕ್ಷ್ಯಾಧಾರಗಳಿವೆ. ಪ್ರತಿಭಟನಾಕಾರರು ಕಲ್ಲು ತೂರದಿದ್ದರೆ ಸುಮಾರು 20ಕ್ಕೂ ಹೆಚ್ಚು ಪೊಲೀಸರಿಗೆ ಗಾಯ ಹೇಗಾಯಿತು. ಪೊಲೀಸರೇ ಕಲ್ಲು ಎಸೆದುಕೊಂಡಿದ್ದಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಕಾನೂನಿನ ಮುಂದೆ ಎಲ್ಲರೂ ಸಮಾನರಾಗಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡಲು ಎಲ್ಲರಿಗೂ ಹಕ್ಕು ಹಾಗೂ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ ಇರಬೇಕು. ಅದನ್ನು ಬಿಟ್ಟು ಕಾನೂನು ಅನ್ನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದರೆ ಸರ್ಕಾರ ಸಮ್ಮನಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಂಧಾನಕ್ಕಾಗಿ ಸಚಿವರನ್ನು ನೇಮಿಸಲಾಗಿತ್ತು.

ಪಂಚಮಸಾಲಿ ಹೋರಾಟಗಾರರು ಟ್ರ್ಯಾಕ್ಟರ್‌ ತರುವ ಮೂಲಕ ಹೋರಾಟ ಮಾಡುತ್ತೇವೆಂದು ಮುಂಚೆಯೇ ತಿಳಿಸಿದ್ದರು. ಅದಕ್ಕೆ ಕೋರ್ಟ್‌ ಅನುಮತಿ ನೀಡದೆ ಹೋರಾಟವನ್ನು ಶಾಂತಿಯುತವಾಗಿ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಡೆಸಲು ಆದೇಶ ನೀಡಿತ್ತು. ಆದರೆ ಹೋರಾಟಗಾರರು ಕಾನೂನು ಅನ್ನು ಕೈಗೆ ತೆಗೆದುಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಎಲ್ಲ ಕಡೆಗೂ ಹೋಗಲು ಸಾಧ್ಯವಿಲ್ಲವೆಂದು ಅರಿತು ಈ ಹೋರಾಟವನ್ನು ತಡೆಯಲು ಸಚಿವ ಎಚ್‌.ಸಿ.ಮಹದೇವಪ್ಪ ಸೇರಿದಂರೆ ಮೂವರು ಸಚಿವರನ್ನು ಸಂಧಾನಕ್ಕಾಗಿ ನೇಮಿಸಲಾಗಿತ್ತು. ಆದರೆ ಅವರು ನಾವು ಸಿಎಂ ಬಳಿಯೇ ಮಾತನಾಡುತ್ತೇವೆ ಎಂದಿದ್ದರು. ಈ ಬೇಡಿಕೆಯನ್ನು ನಾನು ಈಡೇರಿಸಲು ಕರೆದಾಗ ಹೋರಾಟಗಾರರು ಬರಲಿಲ್ಲ ಎಂದಿದ್ದಾರೆ.

ಅಂದಿನ ಕಾಲದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಿ 3ಎ ಒಕ್ಕಲಿಗರಿಗೆ ಶೇ.2 ಹಾಗೂ 3ಬಿ ಪ್ರವರ್ಗಗಳಲ್ಲಿರುವ ಲಿಂಗಾಯತರಿಗೆ ಶೇ.2 ರಷ್ಟು ಸಲಾತಿಯನ್ನು ಜಾರಿ ಮಾಡಿದ್ದರು. ಹಾಗಾಗಿ ಇದನ್ನು ಪ್ರಶ್ನಿಸಿ ಮುಸಲ್ಮಾನರಾದ ರಸೂಲ್‌ ಹಾಗೂ ಇದೇ ಸ್ವಾಮೀಜಿ ಅವರು ಸುಪ್ರಿಂಕೋರ್ಟ್‌ ಮೆಟ್ಟಿಲೇರಿದ್ದರು. ಆ ವೇಳೆ ಅಂದಿನ ಅಡ್ವಕೇಟ್‌ ಜನರಲ್‌ ಹಾಗೂ ಬಿಜೆಪಿ ಸರ್ಕಾರ ಮೀಸಲಾತಿಯಲ್ಲಿ ಬದಲಾವಣೆ ಮಾಡಲು ಸಾಧ್ಯವಿಲ್ಲವೆಂದು ತಿಳಿಸಿದ್ದರು ಎಂದು ಹೇಳಿದ್ದಾರೆ.

ಪಂಚಮಸಾಲಿಯವರಿಗೆ ಸಂವಿಧಾನದ ಪ್ರಕಾರವೇ ಮೀಸಲಾತಿ ನೀಡಲಾಗುವುದು

ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಡಿ ಅಡಿಯಲ್ಲಿದ್ದಾರೆ. ಅವರನ್ನು 2ಎ ಸೇರಿಸಬೇಕಾದರೆ ಸಂವಿಧಾನದ ಪ್ರಕಾರವೇ ಮೀಸಲಾತಿಯನ್ನು ನೀಡಬೇಕಾಗುತ್ತದೆ. ಹೀಗಾಗಿ ನಾವು ಅದರಂತೆಯೇ ನಡೆದುಕೊಳ್ಳುತ್ತೇವೆ ಎಂದಿದ್ದಾರೆ.

 

 

 

ಅರ್ಚನ ಎಸ್‌ ಎಸ್

Recent Posts

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

3 hours ago

ಎಸ್‌ಐಆರ್: ಪ್ರತಿಭಟನೆ ಹತ್ತಿಕ್ಕುವ ಯತ್ನ ಸರಿಯಲ್ಲ

ಮತದಾರರಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೇಂದ್ರ ಚುನಾವಣಾ ಆಯೋಗ ಮತದಾರರ ಸಂವಿಧಾನಬದ್ಧ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ ಎಂದು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ದಲಿತ ಚಳವಳಿಗೆ ಬೇಕಾಗಿದೆ ‘ಹೊಳಪು’

ಆಶಾದಾಯಕ ಕನಸು ಬಿತ್ತುವ ಕೆಲಸಕ್ಕೆ ಚಾಲನೆ ಸಿಗಬೇಕು ಕರ್ನಾಟಕದ ರಾಜಕೀಯ ಚರಿತ್ರೆಯ ದಿಕ್ಕು ೧೯೮೩ ರಲ್ಲಿ ಬದಲಾಯಿತು. ಅರ್ಥಾತ್, ಸ್ವಾತಂತ್ರ್ಯೋತ್ತರ…

3 hours ago

ನಾವು ಇಂದು ಸರೆಂಡರ್ ಆಗಲ್ಲ

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಡೆಡ್ ಬಾಡಿ ಬಿಸಾಕುವ ಸಮಯದಲ್ಲಿ ರಾಘವೇಂದ್ರ ಮತ್ತು ಕಾರ್ತಿಕ್ ಮಧ್ಯೆ ಗಲಾಟೆಯಾಗಿ, ಆತ ಸರೆಂಡರ್…

3 hours ago

ನಾಳೆಯಿಂದ ಮಡಿಕೇರಿಯಲ್ಲಿ ಕಾಫಿ ದಸರಾ ಸಂಭ್ರಮ

ನವೀನ್ ಡಿಸೋಜ ೫೦ ಮಳಿಗೆಗಳಲ್ಲಿ ಕಾಫಿ ವೈವಿಧ್ಯ; ೧೩ ಸಾಧಕ ಕೃಷಿಕರಿಗೆ ಸನ್ಮಾನ, ೬೮ ಪೌರಕಾರ್ಮಿಕರಿಗೆ ಗೌರವ ಮಡಿಕೇರಿ: ಮಂಜಿನ…

4 hours ago

ಎಚ್.ಡಿ.ಕೋಟೆಯಲ್ಲಿ ರಂಗೇರಿದ ನವರಾತ್ರಿ ಉತ್ಸವ

ಮಂಜು ಕೋಟೆ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನಗಳಲ್ಲಿ ೯ ದಿನಗಳು ವಿವಿಧ ಕಾರ್ಯಕ್ರಮ ಎಚ್.ಡಿ.ಕೋಟೆ: ವಿಶ್ವ ವಿಖ್ಯಾತ ಮೈಸೂರು ದಸರಾ ಭಾನುವಾರ…

4 hours ago