ರಾಜ್ಯ

ಅಂದಿನ ಅನುಭವ ಮಂಟಪವೇ ಇಂದಿನ ಪಾರ್ಲಿಮೆಂಟ್‌: ಸಿಎಂ ಸಿದ್ದರಾಮಯ್ಯ

ಬೆಳಗಾವಿ: 12ನೇ ಶತಮಾನದಲ್ಲಿ ಸಮಾಜಕ್ಕೆ ಸಮಾನತೆ ತರುವ ಉದ್ದೇಶದಿಂದ ಬಸವಣ್ಣನವರು ಅಂದಿನ ಕಾಲದಲ್ಲಿಯೇ ಸಮಾನತೆಗಾಗಿ ಅನುಭವ ಮಂಟಪ ಸ್ಥಾಪಿಸಿದ್ದರು. ಆದರೆ ಅದೇ ಇಂದಿನ ಪಾರ್ಲಿಮೆಂಟ್‌ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಇಂದು(ಡಿ.9) ಅನುಭವ ಮಂಟಪ ತೈಲಚಿತ್ರ ಅನಾವರಣಗೊಳಿಸಿದರ ಬಗ್ಗೆ ಸದನ ಕಲಾಪದ ವೇಳೆ ಮಾತನಾಡಿದ ಅವರು, ಇಂದು ನನ್ನ ಕೈಯಿಂದ ಬಸವಣ್ಣನವರ ಅನುಭವ ಮಂಟಪದ ತೈಲಚಿತ್ರದ ಅನಾವರಣ ಆಗಿರುವುದು ಸಂತಸದ ಸಂಗತಿಯಾಗಿದೆ. ಬಸವಣ್ಣನವರು 12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನು ಮಾಡಿದ್ದರು ಎಂದು ಹೇಳಿದ್ದಾರೆ.

ಬಸವಣ್ಣನವರು ಮನುಷ್ಯನಲ್ಲಿರುವ ಮೇಲು-ಕೀಳು ಎಂಬ ತಾರತಮ್ಯವನ್ನು ಹೋಗಲಾಡಿಸಿ, ಮನುಷ್ಯನ ಧರ್ಮದಲ್ಲಿ ತಾರತಮ್ಮ ಆಗಲು ಸಾಧ್ಯವಿಲ್ಲ. ಆದರೆ ವ್ಯಕ್ತಿಯ ಯೋಗ್ಯತೆಯನ್ನು ಜಾತಿ, ವರ್ಣ ವ್ಯವಸ್ಥೆಯ ಆಧಾರದ ಮೇಲೆ ಜಾತಿಯನ್ನು ನಿರ್ಧರಿಸಲಾಗುತ್ತಿತ್ತು. ಹೀಗಾಗಿ ಅವರು ಅವಿದ್ಯಾವಂತರಿಗೂ ಅರ್ಥವಾಗುವಂತೆ ತಮ್ಮ ವಚನದಲ್ಲಿ ದಯೆಯೇ ಧರ್ಮದ ಮೂಲ ಎಂದು ಧರ್ಮವನ್ನು ಭೋದಿಸಿದರು ಎಂದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

1 hour ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

1 hour ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

1 hour ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

1 hour ago