ರಾಜ್ಯ

ವಿನಯ್‌ ಆತ್ಮಹತ್ಯೆ ಪ್ರಕರಣ| ರಾಜ್ಯ ಸರ್ಕಾರ, ಪೊಲೀಸರಿಗೆ ನೈತಿಕತೆ ಇದೆಯಾ?: ಸಿ.ಎನ್‌.ಅಶ್ವಥ್‌ ನಾರಾಯಣ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ದೂರು ದಾಖಲಿಸಿ, ಅವರನ್ನು ಬಂಧಿಸಬೇಕು. ಆದರೆ ಎಫ್‌ಐಆರ್‌ನಲ್ಲಿ ಶಾಸಕರ ಹೆಸರನ್ನೇ ದಾಖಲಿಸಿಲ್ಲ ಎಂದು ಬಿಜೆಪಿ ಶಾಸಕ ಡಾ. ಸಿ.ಎನ್‌.ಅಶ್ವಥ್‌ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಒಂದೂವರೆ ತಿಂಗಳಿನಿಂದ ಶಾಸಕರ ಹಿಂಬಾಲಕರು ಕಿರುಕುಳ ನೀಡಿದ್ದಾರೆ. ವಿನಯ್‌ ಏನು ತಪ್ಪು ಮಾಡಿದರೆಂದು ಕಿರುಕುಳ ಕೊಟ್ಟಿದ್ದಾರೆ. ಹಾಗಾಗಿ ನಮ್ಮ ಸಾವಿಗೆ ನ್ಯಾಯ ಕೊಡಿಸಿ ಎಂದು ವಿನಯ್‌ ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ. ಅಲ್ಲದೇ ಮೃತರ ಸಹೋದರ ಜೀವನ್‌ ಎಂಬಾತ ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಿದರೂ ಸಹ ಶಾಸಕರ ಹೆಸರನ್ನೇ ಎಫ್‌ಐಆರ್‌ ದಾಖಲಿಸಿಲ್ಲ. ಈ ಕಾರಣಕ್ಕೆ ಸರ್ಕಾರ ಮತ್ತು ಪೊಲೀಸರಿಗೆ ನೈತಿಕತೆ ಇದೆಯಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು,
ಈ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿಯಂತೂ ಮರಿಚಿಕೆಯಾಗಿದೆ, ಅಭಿವೃದ್ಧಿ ವಿಷಯದ ಬಗ್ಗೆ ಮಾತಾಡಿದ್ರೆ ಅವರುಗಳ ಮೇಲೆ ರಾಜಕೀಯ ದ್ವೇಷದಿಂದ ದೂರುಗಳು ದಾಖಲಿಸುವುದು , ಬೆದರಿಕೆಯೊಡ್ಡುವುದು ಸಾಮನ್ಯವಾಗಿದೆ ಇದರಿಂದ ಇನ್ನೇಷ್ಟು ಅಮಾಯಕರ ಜೀವ ಪಡಿಯುತ್ತೀರಿ ಸಿದ್ದರಾಮಯ್ಯನವರೇ, ಈ ಕೂಡಲೇ ದೂರನ್ನು ದಾಖಲಿಸಿ ಸಾವಿಗೆ ಕಾರಣಕರ್ತರಾದರವರನ್ನು ಬಂಧಿಸಿ ಅವರ ಕುಟುಂಬಕ್ಕೆ ನ್ಯಾಯ ಒದಗಿಸಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಆಗ್ರಹಿಸಿದ್ದಾರೆ.

ಈ ದ್ವೇಷದ ರಾಜಕಾರಣಕ್ಕೆ ಬಲಿಯಾದ ನಮ್ಮ ಕೊಡಗಿನ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

3 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

3 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

3 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

4 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

7 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

12 hours ago