ರಾಜ್ಯ

ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ, ಇದು ರಾಜಕೀಯ ಕಲೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣದಲ್ಲಿ ಏನೂ ಬೇಕಾದರೂ ಆಗುತ್ತದೆ. ಹೀಗಾಗಿ ಈ ವಿಷಯ ರಾಜಕೀಯ ಸಾಧ್ಯತೆಯ ಕಲೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಬಳಿಕ ಯೋಗೇಶ್ವರ್‌ ಜೊತೆಗೆ ಕುಳಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಯೋಗೇಶ್ವರ್‌ ಪಕ್ಷಕ್ಕೆ ಸೇರಿಕೊಳ್ಳಲು ಯಾವುದೇ ಷರತ್ತು ಹಾಕಿಲ್ಲ. ಇಂದು ಬೆಳಿಗ್ಗೆ 8 ಗಂಟೆಗೆ ನನ್ನನ್ನು ಭೇಟಿ ಮಾಡಿದರು. ಬಳಿಕ, ಸಾಕಷ್ಟು ವಿಚಾರ ಚರ್ಚೆ ಮಾಡಿದ ಮೇಲೆ ನಾನು ಕಾಂಗ್ರೆಸ್‌ನಲ್ಲಿ ಇರಬೇಕೆಂದು ತೀರ್ಮಾನಿಸಿದ್ದೇನೆ ಎಂದರು. ಈ ವಿಚಾರವನ್ನು ನಾನು ತಕ್ಷಣವೇ ಸಿಎಂ ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ಗಮನಕ್ಕೆ ತಂದೆ. ಅವರೆಲ್ಲರೂ ಒಪ್ಪಿಗೆ ಸೂಚಿಸಿದ ನಂತರ ಯೋಗೇಶ್ವರ್‌ರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಲಾಯಿತು ಎಂದರು.

 

 

 

 

 

ಆಂದೋಲನ ಡೆಸ್ಕ್

Recent Posts

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

11 mins ago

ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…

31 mins ago

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

42 mins ago

ಸಿನಿಮಾ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು : ನಿರ್ದೇಶಕ ಸುರೇಶ್‌ ಆಶಯ

ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…

45 mins ago

ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಗಳ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…

49 mins ago

ಈ ದಿನ ಮೈಸೂರು ಅರಮನೆಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಮೈಸೂರು : ಸಾಂಸ್ಕೃತಿಕ ನಗರಿಯ ಅರಮನೆಗೆ ಡಿ.20ರಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಅರಮನೆ ಮಂಡಳಿಯ ಕಾರ್ಯನಿರ್ವಾಹಕ ಅಧಿಕಾರಿಗಳ…

1 hour ago