ರಾಜ್ಯ

ಸತತ 2ನೇ ಬಾರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಸಿ.ಎಸ್‌.ಷಡಾಕ್ಷರಿ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆಗೆ ಇಂದು ಚುನಾವಣೆ ನಡೆದಿದ್ದು, ಸತತ 2ನೇ ಬಾರಿಗೆ ಸಿ.ಎಸ್‌.ಷಡಕ್ಷರಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನಗರದ ಕಬ್ಬನ್‌ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ಇಂದು(ಡಿಸೆಂಬರ್‌.27) ಬೆಳಿ

ಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಮತದಾನ ನಡೆದಿದ್ದು ಅಧ್ಯಕ್ಷರಾಗಿ ಸಿ.ಎಸ್‌.ಷಡಾಕ್ಷರಿ ಅವರು ನೇಮಕಗೊಂಡಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಂಘದ 971 ಪ್ರತಿನಿಧಿಗಳು, ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾವಣೆಗೆ ಹಕ್ಕು ಹೊಂದಿದ್ದು, ಮತದಾನವನ್ನು ಮಾಡಿದ್ದರು.

ಇಂದು ನಡೆದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹುದ್ದೆಯ ಮತದಾನದಲ್ಲಿ ಹಾಲಿ ಅಧ್ಯಕ್ಷ ಸಿ.ಎಸ್‌.ಷಡಕ್ಷರಿ ಹಾಗೂ ಮಾಜಿ ಅಧ್ಯಕ್ಷ ಬಿ.ಪಿ.ಮಂಜೇಗೌಡ ಅವರ ಸೋದರ ಬಿ.ಪಿ.ಕೃಷ್ಣೇಗೌಡರ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು.

ಚುನಾವಣಾ ಫಲಿತಾಂಶದ ಬಂದ ಬಳಿಕ ಸಿ.ಎಸ್‌.ಷಡಾಕ್ಷರಿ 507 ಮತಗಳನ್ನು ಪಡೆದುಕೊಂಡರೆ, ಬಿ.ಪಿ.ಕೃಷ್ಣೇಗೌಡ ಅವರು 442 ಮತಗಳನ್ನು ಪಡೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷ ಷಡಕ್ಷರಿ ಅವರೇ ಈ ಬಾರಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

1 hour ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

1 hour ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

1 hour ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

1 hour ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

1 hour ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

1 hour ago