ರಾಜ್ಯ

ರಾಜ್ಯ ಸರ್ಕಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ನೀಡಿದ ಸಿ.ಟಿ.ರವಿ

ಮೈಸೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಮಧ್ಯೆ ಜಟಾಪಟಿ ಇದೀಗ ರಾಜ್ಯಪಾಲರ ಭವನಕ್ಕೆ ತಲುಪಿದ್ದು, ರಾಜ್ಯಪಾಲರು ಮಧ್ಯ ಪ್ರವೇಶಿಸಿ ರಾಜ್ಯ ಸರ್ಕಾರದ ಕ್ರಮ ಕೈಗೊಳ್ಳುವಂತೆ ಸಿ.ಟಿ.ರವಿ ದೂರು ನೀಡಿದ್ದಾರೆ.

ರಾಜಭವನಕ್ಕೆ ಇಂದು(ಡಿಸೆಂಬರ್‌.30) ಬಿಜೆಪಿ ಮುಖಂಡರೊಂದಿಗೆ ತೆರಳಿದ ಸಿ.ಟಿ.ರವಿ ತಮ್ಮ ಬಂಧನ ಪ್ರಕರಣದ ವಿಚಾರವಾಗಿ ಸತ್ಯಶೋಧನೆ ನಡೆಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರ ನಿರ್ದೇಶನದಂತೆ ಸಂವಿಧಾನ ಮತ್ತು ಕಾನೂನು ಉಲ್ಲಂಘನೆ ಮಾಡಿ ಪೊಲೀಸ್‌ ಇಲಾಖೆ ಮೂಲಕ ಅಧಿಕಾರದ ದುರ್ಬಳಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್‌ ವಿಪಕ್ಷ ನಾಯಕ ಎನ್‌.ಛಲವಾದಿ ನಾರಾಯಣ ಅವರ ನೇತೃತ್ವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಗೆ ದೂರು ಸಲ್ಲಿಸಿದ್ದಾರೆ.

ಇನ್ನು ಸಿ.ಟಿ. ರವಿ ಅವರು ಈ ದೂರಿನಲ್ಲಿ ಸದನದಲ್ಲಿ ಅಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದೇನೆಂಬ ಬಗ್ಗೆ ತನ್ನ ಬಂಧನವಾಗಿದ್ದು, ಆ ನಂತರ ಆದ ಬೆಳವಣಿಗೆಗಳನ್ನು ಸೇರಿದಂತೆ ಒಟ್ಟು 8 ಪುಟಗಳ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…

1 hour ago

ಮುಕ್ತಾಯ ಹಂತಕ್ಕೆ ತಲುಪಿದ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…

2 hours ago

ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ವಿಡಿಯೋ ಅಸಲಿ ಎಂದ ತನಿಖಾ ತಂಡ

ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್‌ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…

2 hours ago

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಯತ್ನ: ಮ್ಯಾಕ್ರನ್‌ ಜೊತೆ ಮೋದಿ ಮಾತುಕತೆ

ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್‌ ಮ್ಯಾಕ್ರನ್‌ ಜೊತೆ…

2 hours ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ನಿಧನ

ಹಾಸನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…

5 hours ago

ರಾಜ್ಯದಲ್ಲಿ ಮತ್ತೆರಡು ದಿನ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್‌, ಕಲಬುರ್ಗಿ,…

5 hours ago