ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ನಟ್ಟು, ಬೋಲ್ಟು ಸರಿಪಡಿಸುವ ಮೊದಲು ಕಾಂಗ್ರೆಸ್ ಪಕ್ಷದ ನಟ್ಟು ಬೋಲ್ಟ್ ಸರಿ ಮಾಡಿಕೊಳ್ಳಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಮಾರ್ಚ್.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರು ನಟ್ಟು, ಬೋಲ್ಟ್ ಟೈಟ್ ಮಾಡಲು ಅವರೇನೂ ಜೀತಾದಾಳುಗಳಲ್ಲ. ಅವರು ಕಲಾವಿದರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮಾರ್ ಅವರು ಸಿನಿಮಾ ಕಲಾವಿದರ ಬಳಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಒಂದು ಪಕ್ಷ ಕರೆ ನೀಡಿದಾಗ ಅದಕ್ಕೆ ಕಲಾವಿದರು ಬರಬೇಕೆಂಬ ನಿಯಮವಿಲ್ಲ. ಈ ರೀತಿ ಹುಚ್ಚು ಹುಚ್ಚಾಗಿ ಮಾತನಾಡುವುದನ್ನು ಬಿಟ್ಟು, ತಮ್ಮ ಪಕ್ಷದ ನಟ್ಟು, ಬೋಲ್ಟ್ ಸರಿಮಾಡಿಕೊಳ್ಳಲಿ ಎಂದು ಹರಿಹಾಯ್ದರು.
ಏನಿದು ವಾಕ್ಸಮರ?
16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನಾ ಸಮಾರಂಭಕ್ಕೆ ನಟ ಮತ್ತು ನಟಿಯು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದಿದ್ದಕ್ಕೆ ಬೇಸರಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಯಾವ ನಟನಿಗೆ, ಯಾವ ನಟಿಗೆ ಎಲ್ಲೆಲ್ಲಿ ನಟ್ಟು, ಬೋಲ್ಟ್ ಟೈಟ್ ಮಾಡಬೇಕು ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದರು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…