Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ಕಿಡಿ

ಬೆಂಗಳೂರು: ರಾಜ್ಯಸರ್ಕಾರದ ವತಿಯಿಂದ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಗೃಹ ನಿರ್ಮಾಣ ಮಾಡುವ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಯನಾಡು ಕಳಕಳಿ ಗುಲಾಮಗಿರಿಯ ಸಂಕೇತದಂತೆ ಕಾಣುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಈ ಕುರಿತು ಇಂದು(ಡಿ.11) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯಸರ್ಕಾರ ಕೇರಳದಲ್ಲಿ ನೆರೆ ಸಂತ್ರಸ್ಥರಿಗೆ ಮನೆ ಕಟ್ಟಿಕೊಡುವ ಭರವಸೆಯನ್ನು ನೀಡಿದೆ. ಈ ವಿಚಾರ ಮಾನವೀಯವಾಗಿ ಮನೆ ನಿರ್ಮಾಣ ಮಾಡುವುದು ಸರಿ ಎಂಬಂತೆ ಕಾಣುತ್ತಿದೆ. ಆದರೆ ಸಿಎಂ ಸಿದ್ದರಾಮಯ್ಯ ಅವರ ಈ ನಡೆ ನಮಗೆ ಮಾನವೀಯ ನೆಲೆ ಎಂದು ಕಾಣುತ್ತಿಲ್ಲ. ಬದಲಾಗಿ ಇದು ಗುಲಾಮಗಿರಿಯ ಸಂಕೇತ ಎಂದು ಕಾಣುತ್ತಿದೆ. ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಅವರು ಸಂಸದರಾಗಿದ್ದು, ಅವರೇ ಆ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಕಾಳಜಿವಹಿಸಬೇಕು ಎಂದು ಟೀಕಿಸಿದ್ದಾರೆ.

ಈಗಾಗಲೇ ನಮ್ಮ ರಾಜ್ಯದಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಎತ್ತಿನಹೊಳೆ ಯೋಜನೆ ಸಂಬಂಧವಾಗಿ ರೈತರು ಅಧಿಕಾರಿಗಳ ಜೊತೆ ವಾದ-ವಿವಾದ ಮಾಡಿ ಹೊಳಗೆ ಹಅರಿ ಸಾವನ್ನಪ್ಪಿದ್ದಾರೆ. ಆದರೆ ಸಿದ್ದರಾಮಯ್ಯ ಅವರು ಮಾತ್ರ ವಯನಾಡು ಬಗ್ಗೆ ಕಳಕಳಿವಹಿಸುತ್ತಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ನಡೆ ಗುಲಾಮಗಿರಿಯಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ ನಾಯಕರು ಸರ್ಕಾರ ಹಾಗೂ ಸಿದ್ದರಾಮಯ್ಯ ವಿರುದ್ಧ ಕೇಳಿ ಬರುತ್ತಿರುವ ಭ್ರಷ್ಟಾಚಾರದ ಆರೋಪಗಳ ಬಗ್ಗೆ ಉತ್ತರ ನೀಡುವಲ್ಲೇ ಕಾರ್ಯನಿರತವಾಗಿದ್ದಾರೆ. ಅಲ್ಲದೇ ಈ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಗಮನಹರಿಸುತ್ತಿಲ್ಲ. ಹಾಗಾಗಿ ವಿಧಾನಸಭೆಯಲ್ಲಿ ಈ ಸಂಬಂಧದ ಪ್ರಶ್ನೆಯನ್ನು ಹಾಗೂ ಬಾಣಂತಿಯರ ಸಾವು ಬಗ್ಗೆ ಎಸ್‌ಐಟಿ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

 

Tags: